ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿಯ ವತಿಯಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಶೇರು ಪ್ರಮಾಣ ವಿತರಣೆ ಕಾರ್ಯಕ್ರಮ ಜು.27 ರಂದು ಪೂ.10ಕ್ಕೆ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿಕರು ಹಾಗೂ ಸಾಮಾಜಿಕ ಧುರೀಣರಾದ ನಿತ್ಯಾನಂದ ಮುಂಡೋಡಿ, ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಭಾಗವಹಿಸಲಿದ್ದಾರೆ. ಸಿಪಿಸಿಆರ್ಐ ಕಿದು ಸಂಶೋಧನಾ ಕೇಂದ್ರದ ವಿಜ್ಞಾನಿ ದಿವಾಕರ ವೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
- Thursday
- November 21st, 2024