ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 30,041 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಅಧಿಸೂಚನೆಯನ್ನು ಹೊರಡಿಸಿರುವ ಭಾರತೀಯ ಅಂಚೆ ಇಲಾಖೆ, ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆಗಸ್ಟ್ 3ರಂದು ಪ್ರಾರಂಭೌಾಗಿದ್ದು, ಆಗಸ್ಟ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಇಂಡಿಯಾ ಪೋಸ್ಟ್ನ ಅಧಿಕೃತ ವೆಬ್ಸೈಟ್ indiapostgdsonline.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯಲ್ಲಿ ಏನಾದರೂ ತಪ್ಪಾಗಿದ್ದರೆ ಆಗಸ್ಟ್ 24 ರಿಂದ ಆಗಸ್ಟ್ 26 ರವರೆಗೆ ಅಭ್ಯರ್ಥಿಗಳು ತಿದ್ದುಪಡಿ/ಎಡಿಟ್ ಮಾಡಲು ಅವಕಾಶ ಕಲ್ಪಿಸಲಾಗಿದೆ.
ವಯೋಮಿತಿ, ಅರ್ಹತೆ
ಗ್ರಾಮೀಣ ಡಾಕ್ ಸೇವಕ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು 18 ರಿಂದ 40 ವರ್ಷಗಳ ನಡುವೆ ಇರಬೇಕು.
10ನೇ ತರಗತಿ ಪಾಸಾಗಿರಬೇಕು.
ಅಭ್ಯರ್ಥಿಗಳಿಗೆ ಆಯಾ ರಾಜ್ಯದ ಮಾತೃಭಾಷೆ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು.
ಪುರುಷ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ನೂರು ರೂಪಾಯಿ ಪಾವತಿಸಬೇಕಾಗುತ್ತದೆ.
ಮಹಿಳೆಯರು, ತೃತೀಯ ಲಿಂಗಿಗಳು ಮತ್ತು ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಗೆ ಆರಂಭ ದಿನಾಂಕ: 03-08-2023
-ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 23-08-2023
ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ಸೈಟ್ indiapostgdsonline.gov.inನಲ್ಲೇ ಅರ್ಜಿ ಸಲ್ಲಿಸಬೇಕು.