ಸುಳ್ಯ ನಗರದಲ್ಲಿ ಕೋವಿಡ್ 19 ರ ಹಿನ್ನೆಲೆಯಲ್ಲಿ ಮುಖಕ್ಕೆ ಮಾಸ್ಕ್ ಧರಿಸದೆ ಓಡಾಡುವವರಿಗೆ ನಗರ ಪಂಚಾಯತ್, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ದಂಡ ವಿಧಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಇಂಜಿನಿಯರ್ ಶಿವಕುಮಾರ್, ಪೊಲೀಸ್ ಇಲಾಖೆಯಿಂದ ಎಎಸ್ಐ ಭಾಸ್ಕರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಬ್ರಹ್ಮಣ್ಯ , ಆರೋಗ್ಯ ಮತ್ತು ಶಿಕ್ಷಣ ಅಧಿಕಾರಿ ಪ್ರಮೀಳಾ , ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಮಸ್ಕ್ ದರಿಸದೆ ತಿರುಗಾಡುತ್ತಿರುವ ವರಿಗೆ ರೂಪಾಯಿ 200 ರಂತೆ ದಂಡ ವಿಧಿಸುತ್ತಿದ್ದಾರೆ.
- Wednesday
- November 27th, 2024