ವಿದ್ಯುತ್ ಸಂಪರ್ಕದಲ್ಲಿ ವಿದ್ಯುತ್ ಬಳಕೆದಾರರಿಗೆ ಯಾವುದೇ ಸಮಸ್ಯೆ ಆಗಬಾರದು ಆಗಬಾರದೆಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಮೆಸ್ಕಾಂ ಅದಾಲತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯುತ್ ಸಮಸ್ಯೆಗಳನ್ನು ತಕ್ಷಣ ಸರಿಪಡಿಸಿಕೊಡುವಂತೆ ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ವಿದ್ಯುತ್ ಸಮಸ್ಯೆಗಳ ಬಗ್ಗೆ ತಿಳಿಸಿದರು. ಲೈನ್ ಮ್ಯಾನ್ ಕೊರತೆ, ಪವರ್ ಕಟ್ ಸಮಸ್ಯೆ, ದಿನಂಪ್ರತಿ ಎದುರಿಸುತ್ತಿರುವ ಸಮಸ್ಯೆಗಳನ್ನು ಹೇಳಿಕೊಂಡರು.
ಈ ಸಭೆಯಲ್ಲಿ ಮಾಜಿ ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು, ಮೆಸ್ಕಾಂ ಎಇಇ ಹರೀಶ್ ನಾಯ್ಕ್, ಜೆಇ ಹಾಗೂ ಬಳಕೆದಾರರು ಉಪಸ್ಥಿತರಿದ್ದರು.