Ad Widget

ಜಾಲ್ಸೂರು : ಗ್ರಂಥಾಲಯ ಪಿತಾಮಹ ಡಾ. ಎಸ್ ಅರ್ ರಂಗನಾಥ್ ಜನ್ಮ ದಿನಾಚರಣೆ

ಜಾಲ್ಸೂರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹ ಪದ್ಮಶ್ರೀ ಡಾ. ಎಸ್ ಅರ್ ರಂಗನಾಥ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀಮತಿ ದೇವಕಿ ಶಿಕ್ಷಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕದಿಕಡ್ಕ ದೀಪ ಬೆಳಗಿಸುವುದರ ಮೂಲಕ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು. ಸುಬ್ರಹ್ಮಣ್ಯ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ವೇದ ಹೆಚ್. ಶೆಟ್ಟಿ ಅವರು ಗ್ರಂಥ ಪಾಲಕರ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಣ ಫೌಂಡೇಶನ್ ನ ಸುಳ್ಯ ತಾಲೂಕು ಸಂಯೋಜಕರಾದ ದಿನೇಶ್ ಡಿ.ಎಸ್. ಕಾರ್ಯಕ್ರಮವನ್ನು ಉದ್ದೇಶಿಸಿ ಗ್ರಂಥಾಲಯದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರೇಮ ಜಾಲ್ಸೂರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು ಹಾಗೂ ಕಾರ್ಯಕ್ರಮದ ಕೊನೆಯಲ್ಲಿ ಗ್ರಂಥಾಲಯದ ಮೇಲ್ವಿಚಾರಕರಾದ ಸುಚಿತ್ರಾ ಕೆ. ಪಿ. ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಯವರು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚಣೆಯ ಪ್ರಯುಕ್ತ ತ್ರಿವರ್ಣ ದ್ವಜ ಹಾಗೂ ಬ್ಯಾಡ್ಜ್ ಗಳನ್ನು ವಿದ್ಯಾರ್ಥಿಗಳು ತಯಾರಿಸಿದರು. ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಚಾ ತಿಂಡಿಯನ್ನು ವಿತರಿಸಲಾಯಿತು. ವೇದ ಎಚ್. ಶೆಟ್ಟಿ ಸ್ವಾಗತಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading