ಸುಳ್ಯ ತಾಲೂಕು ಪಂಚಾಯತ್ ನ ನೂತನ ಕಾರ್ಯನಿರ್ವಾಹಣಾ ಅಧಿಕಾರಿಗೆ ಸ್ವಾಗತ ಹಾಗೂ ವರ್ಗಾವಣೆ ಗೊಂಡ ಅಧಿಕಾರಿಗಳಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ. 14 ರಂದು ನಡೆಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಸುಳ್ಯ ಕಾರ್ಯನಿರ್ವಾಹಣಾ ಅಧಿಕಾರಿ ರಾಜಣ್ಣ , ನಿರ್ಗಮಿತ ಕಾರ್ಯನಿರ್ವಾಹಣಾ ಅಧಿಕಾರಿ ಎನ್. ಭವಾನಿ ಶಂಕರ್ , ನೇತ್ರಾವತಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷೆ ಚಂದ್ರಾವತಿ ಉಪಸ್ಥಿತರಿದ್ದರು.
ಈ ಸಮಾರಂಭ ಸರಳ ಸಮಾರಂಭದಲ್ಲಿ ನೂತನವಾಗಿ ಆಗಮಿಸಿದ ಇಒ ರಾಜಣ್ಣರನ್ನು ಶಾಲು ಹೊದಿಸಿ ಸನ್ಮಾನಿಸಿ ಸುಳ್ಯ ತಾಲೂಕು ಆಡಳಿತಕ್ಕೆ ಸ್ವಾಗತಿಸಿದರು ಅದೇ ರೀತಿಯಲ್ಲಿ ನಿರ್ಗಮಿತ ಇಒ ಭವಾನಿಶಂಕರ್ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಬೀಳ್ಕೊಡಲಾಯಿತು.
ಈ ಸಮಾರಂಭದಲ್ಲಿ ತಾಲೂಕಿನ ಇಲಾಖಾಧಿಕಾರಿಗಳಾದ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್, ಪಶುವೈದ್ಯಕೀಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನಿತಿನ್ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಇ, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಗಿರೀಶ್ ಆರ್, ಉಪ ತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್, ಸಿಡಿಪಿಒ ಶೈಲಜಾ ದಿನೇಶ್ ಕುಕ್ಕುಜಡ್ಕ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ಯಯಾಧಿಕಾರಿ ಶೀತಲ್ ಯು.ಬಿ, ಮರ್ಕಂಜ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ವೀಣಾ ಎಂ.ಟಿ, ಜಿ.ಪಂ. ಇಂಜಿನಿಯರ್‌ಗಳಾದ ಜನಾರ್ಧನ್, ಮಣಿಕಂಠ, ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು, ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕಿ ಸರೋಜಿನಿ, ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಹರೀಶ್ ರಾವ್, ಸರಕಾರಿ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ, ಲಯನ್ಸ್ ಕ್ಲಬ್ ಅಧ್ಯಕ್ಷ ವೀರಪ್ಪ ಗೌಡ ಕಣ್ಮಲ್, ತಾಲೂಕು ಪಂಚಾಯತ್ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಸಿಬ್ಬಂದಿಗಳು ಹಾಗೂ ನಾಗರಿಕರು ಉಪಸ್ಥಿತರಿದ್ದರು.