Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ
ಸ್ವಾತಂತ್ರ್ಯ ದಿನಾಚರಣೆ

ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ
ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಸುಬ್ರಹ್ಮಣ್ಯದ ಕಾಶಿ ಕಟ್ಟೆಯಿಂದ ಮೆರವಣಿಗೆಯ ಮೂಲಕ ಅತಿಥಿಗಳನ್ನ ಕರೆತಂದು ನಂತರ ಶಾಲಾ ಮೈದಾನದಲ್ಲಿ ಧ್ವಜಾರೋಹಣವನ್ನು ನೆರವೇರಿಸಲಾಯಿತು. ಧ್ವಜಾರೋಹನವನ್ನು ನಿವೃತ್ತ ಯೋಧ ದಿನೇಶ್ ಸಿಡಿ ನೆರವೇರಿಸಿ, ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ.ಉಪಾಧ್ಯಕ್ಷ ಎಚ್ ಎಲ್ ವೆಂಕಟೇಶ್ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಶ್ವಿನಿ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಅಧ್ಯಕ್ಷರು ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್ ನಾಯರ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಸಂರ್ಕೀತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿನಿ ಕುಮಾರಿ ಆಶ್ರಿತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ದೀರ್ಘ ಕಾಲದ ಸೇವೆ ಸಲ್ಲಿಸಿದ ದಿನೇಶ್ ಸಿಡಿ ಅವರನ್ನು ಸನ್ಮಾನಿಸಲಾಯಿತು ಹಾಗೂ ಇತ್ತೀಚೆಗೆ ಸಿಎ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಶಾಲೆಯ ಹಿರಿಯ ವಿದ್ಯಾರ್ಥಿನಿ ಕುಮಾರಿ ಆಶ್ರಿತ ಅವರನ್ನು ಸನ್ಮಾನಿಸಲಾಯಿತು. ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading