Ad Widget

ಸುಬ್ರಹ್ಮಣ್ಯ : ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

. . . . . . . . .

ಸುಬ್ರಹ್ಮಣ್ಯದ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಆ.15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ರಾಮಚಂದ್ರ ಪಳಂಗಾಯ ಧ್ವಜಾರೋಹಣ ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮ ನಡೆಯಿತು.

. . . . . . .

ರಾಮಚಂದ್ರ ಪಳಂಗಾಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಖ್ಯೋಪಾಧ್ಯಾಯರಾದ ಮಾಧವ ಅವರು ಉಪಸ್ಥಿತರಿದ್ದರು. ಮುಖ್ಯ ಭಾಷಣಕಾರರಾಗಿ ಶಿವಕುಮಾರ್ ಹೊಸೋಳಿಕೆ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷರಾದ ಪ್ರೋ| ರಂಗಯ್ಯ ಶೆಟ್ಟಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಸತೀಶ್ ಕೂಜುಗೋಡು ಸ್ವಾಗತಿಸಿ ಖಜಾಂಜಿ ಚಂದ್ರಶೇಖರ ಪಾನತ್ತಿಲ ವಂದಿಸಿದರು. ವಿಮಲ ರಂಗಯ್ಯ ಕಾರ್ಯಕ್ರಮ ನಿರೂಪಣೆ ಮಾಡಿದರು. ನಂತರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. (ವರದಿ : ಉಲ್ಲಾಸ್ ಕಜ್ಜೋಡಿ)


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading