Ad Widget

ಸೇನೆ ಸೇರಬಯಸುವವರಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

. . . . . . .

ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ, 2003 ರ ಜನವರಿ 1 ರಿಂದ 2006 ರ ಜುಲೈ 1 ರ ನಡುವೆ ಜನಿಸಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 805077000, ದೂ. ಸಂಖ್ಯೆ: 0820-2574881 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!