ಸೌಜನ್ಯ ಹತ್ಯೆ ಪ್ರಕರಣದ ನ್ಯಾಯಕ್ಕಾಗಿ ಹಾಗೂ ಮರು ತನಿಖೆಗೆ ಒತ್ತಾಯಿಸಿ ಆ.31ರಂದು ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ದೇವಸ್ಥಾನದ ವರೆಗೆ ಮೌನ ಮೆರವಣಿಗೆ ನಡೆಯಲಿದೆ ಎಂದು ಸುಬ್ರಹ್ಮಣ್ಯ ಸೌಜನ್ಯಳ ನ್ಯಾಯಕ್ಕಾಗಿ ಹೂರಾಟ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಿಂದ ನಡೆಯಲಿದೆ ಎಂದು ಸಮಿತಿಯ ಡಾl ರವಿ ಕಕ್ಕೆಪದವು ಹೇಳಿದರು.
ಅವರು ಆ.27 ರಂದು ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಹೇಳಿದರು.
ಪಾದಯಾತ್ರೆಯಲ್ಲಿ ದೇವಸ್ಥಾನದವರೆಗೆ ಸಾಗಿ ಅಲ್ಲಿ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಸಭೆ ನಡೆಯಲಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಮತ್ತಿತರರು ಭಾಗವಹಿಸುವರು ಎಂದವರು ತಿಳಿಸಿದರು.
ರೋಟರಿ ಕ್ಲಬ್ ಸುಬ್ರಹ್ಮಣ್ಯ, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯ, ಜೆಸಿಐ ಸುಬ್ರಹ್ಮಣ್ಯ, ಬಿಎಂಎಸ್ ಆಟೋ ಚಾಲಕ ಮಾಲಕ ಸಂಘ ಸುಬ್ರಹ್ಮಣ್ಯ, ಕುಕ್ಕೇ ಶ್ರೀ ಆಟೋ ಚಾಲಕ ಮಾಲಕ ಸಂಘ, ಕುಕ್ಕೇ ಶ್ರೀ ಟ್ಯಾಕ್ಸಿ ಚಾಲಕ ಮಾಲಕ ಸಂಘ, ಸಂಜೀವಿನಿ ಒಕ್ಕೂಟ,ರವಿಕಕ್ಕೆಪದವು ಸಮಾಜ ಸೇವ ಟ್ರಸ್ಟ್, ಸುಬ್ರಹ್ಮಣ್ಯ ವರ್ತಕರ ಸಂಘ, ಗೌಡ ಸಮಿತಿ ಸುಬ್ರಹ್ಮಣ್ಯ ವಲಯ ಹಾಗೂ ವಿವಿಧ ಸಂಘ ಸಂಸ್ಥೆಗಳು ಮತ್ತು ಸ್ಥಳೀಯರು ಭಾಗವಹಿಸಲಿದ್ದಾರೆ ಎಂದರು. ಸಮಿತಿಯ ಗೋಪಾಲ ಎಣ್ಣೆಮಜಲು, ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ಗುರುಪ್ರಸಾದ್ ಮೇಲ್ನಾಡ್, ಸತೀಶ್.ಕೆ.ಪಿ. ಕೊಮ್ಮೆಮನೆ, ದಿನೇಶ್ ಶಿರಾಡಿ, ವಿವೇಕಾನಂದ ದೇವರಗದ್ದೆ, ತಿಲಕ್ ಎ.ಎ. ಭಾರತಿ ದಿನೇಶ್, ಶೇಖರ್ ಆಗೋಲಿಕಜೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.