Ad Widget

ಆರಂತೋಡು ಗ್ರಾಮ ಪಂಚಾಯತ್ ಹಾಗೂ ಸಹಕಾರಿ ಸಂಘದ ನಿಯೋಗ ಶಾಸಕರ ಭೇಟಿ – ಅವಳಿ ಗ್ರಾಮಗಳ ಅಭಿವೃದ್ಧಿಗೆ ಮನವಿ

ಆರಂತೋಡು ಗ್ರಾಮ ಪಂಚಾಯತ್ ಮತ್ತು ಸಹಕಾರಿ ಸಂಘದ ನೇತೃತ್ವದ ನಿಯೋಗ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗಿರಥಿ ಮುರುಳ್ಯ ಯರವರನ್ನು ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ, ಆರಂತೋಡು ತೊಡಿಕಾನ ಅವಳಿ ಗ್ರಾಮಗಳ ವ್ಯಾಪ್ತಿಯ ವಿವಿಧ ಕಾಮಗಾರಿ ಗಳನ್ನು ಆದ್ಯತೆ ಮೇಲೆ ಕ್ರಮ ಕೈ ಗೊಳ್ಳಲು ಮನವಿ ಸಲ್ಲಿಸಲಾಯಿತು. ಈ ನಿಯೋಗದಲ್ಲಿ ಆರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಉಪಾಧ್ಯಕ್ಷರಾದ ಶ್ರೀಮತಿ ಭವಾನಿ ಚಿಟ್ಟನೂರ್, ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಪಂಚಾಯತ್ ಮಾಜಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರಿಣಿ ದೇರಾಜೆ ಮಾಜಿ ಉಪಾಧ್ಯಕ್ಷರಾದ ಕು. ಶ್ವೇತಾ ಅರಮನೆಗಯ ಪಂಚಾಯತ್ ಸದಸ್ಯರಾದ ವೆಂಕಟ್ರಮಣ ಪೆತ್ತಾಜೆ, ಪುಷ್ಪಾಧರ ಕೊಡಂಕೇರಿ, ಶ್ರೀಮತಿ ಮಾಲಿನಿ ವಿನೋದ್ ಉಳುವಾರ್, ಶ್ರೀಮತಿ ಸುಜಯ ಲೋಹಿತ್,ಸಹಕಾರಿ ಸಂಘದ ನಿರ್ದೇಶಕರುಗಳಾದ ಚಂದ್ರಶೇಖರ ಚೋಡಿಪಣೆ, ಕುಸುಮೋದರ ಅಡ್ಕಬಳೆ, ಸಂತೋಷ ಚಿಟ್ಟನೂರ್. ಶಾಸಕರ ಜೊತೆ ಬಿ. ಜೆ. ಪಿ. ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಪ್ರದಾನ ಕಾರ್ಯದರ್ಶಿ ಗಳಾದ ಸುಬೋದ್ ಶೆಟ್ಟಿ ಮೇನಾಲ, ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾದ ಎಸ್ಎನ್ ಮನ್ಮಥ, ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading