ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಮೃತ ಪಟ್ಟಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಅಡ್ಕಾರ್ ಬಳಿ ಸಂಭವಿಸಿದೆ.
ಹುಣಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದಾಗ ಕಾರು ಅಡ್ಕಾರಿನ ಹಾವೇರಿ ಮೂಲದ ಕಾರ್ಮಿಕರು ಅಡ್ಕಾರ್ ನ ಕರಾವಳಿ ಹೊಟೇಲ್ ಬಳಿ ರಸ್ತೆ ಬದಿ ನಿಂತಿದ್ದಾಗ ಕಾರು ಡಿಕ್ಕಿ ಹೊಡೆದಿದೆ, ಬಳಿಕ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೂಡ ಡಿಕ್ಕಿ ಹೊಡೆದಿದೆ. ಐವರು ಕಾರ್ಮಿಕರ ಮೇಲೆ ಕಾರು ಹರಿದ ಪರಿಣಾಮ ಒರ್ವ ಮೃತಪಟ್ಟಿದ್ದ, ಇಬ್ಬರು ಗಂಭೀರ ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ, ಇನ್ನಿಬ್ಬರನ್ನು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಮಿಕರು ಹಾವೇರಿ ಮೂಲದವರಾಗಿದ್ದು ಜಾಲ್ಸೂರು ಗ್ರಾಮದಲ್ಲಿ ಟ್ಯಾಂಕ್ ನಿರ್ಮಾಣ ಕಾಮಗಾರಿ ನಿರ್ವಹಿಸಲು ಆಗಮಿಸಿದ್ದರು.