ಸುಳ್ಯ ಪೊಲೀಸರು ಮಾಧ್ಯಮಗಳ ಮೇಲೆ ದಾಖಲಿಸಿದ್ದ ಕೇಸಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ತಿಳಿದು ಬಂದಿದೆ.
ಘಟನೆ ವಿವರ: ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನೋರ್ವ ಇದ್ದ ಎಂದು ಹಿಂದೂ ಯುವಕರ ಗುಂಪೊಂದು ಯುವಕನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪದಲ್ಲಿ ಸುಳ್ಯ ಠಾಣಾ ಪೊಲೀಸರು ಆರೋಪಿತ ಯುವಕರನ್ನು ವಶಕ್ಕೆ ಪಡೆದಿದ್ದರು. ವಿಷಯ ಸುದ್ದಿಯಾಗುತ್ತಲೇ ಅರುಣ್ ಕುಮಾರ್ ಪುತ್ತಿಲ ಸುಳ್ಯ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾತುಕತೆ ನಡೆಸಿ ಯುವಕರನ್ನು ರಿಲೀಸ್ ಮಾಡಿದ್ದಾರೆ ಎಂದು ವೆಬ್ ಮಾಧ್ಯಮಗಳು ವರದಿ ಪ್ರಕಟಿಸಿದ್ದವು.ಇದು ಕೆಲ ರಾಜಕೀಯ ನಾಯಕರುಗಳಿಗೆ ಮತ್ತು ಪೋಲಿಸರಿಗೆ ತೀವ್ರ ಮುಜುಗರ ಉಂಟಾಗಿತ್ತು, ಘಟನೆ ಕೋಮು ಸಾಮರಸ್ಯ ಕದಡುವ ಹಂತದಲ್ಲಿರುವಾಗ ಈ ರೀತಿಯ ವರದಿಯ ಬಗ್ಗೆ ಇಲಾಖೆ ವರದಿ ಮಾಡಿದ್ದ ವೆಬ್ ಸೈಟ್ ಮಾದ್ಯಮಗಳ ಮೇಲೆ ಸುಮೋಟೊ ಕೇಸು ದಾಖಲಿಸಿತ್ತು, ಮತ್ತು ಈ ಬಗ್ಗೆ ಮಾತುಕತೆ ನಡೆಸಿ ಕೇಸು ದಾಖಲು ಮಾಡದಂತೆ ಮಾದ್ಯಮ ಪ್ರಮುಖರು ಇಲಾಖೆಯಲ್ಲಿ ವಿನಂತಿ ಮಾಡಿಕೊಂಡಿದ್ದರು,ಕ್ಷಮೆ ನೀಡದ ಪೋಲಿಸರು ಪ್ರಕರಣ ದಾಖಲಿಸಿದ್ದರು ಗಂಭೀರವಾಗಿ ಪರಿಗಣಿಸಿದ ಪುತ್ತೂರು ತಾಲೂಕು ಜರ್ನಲಿಸ್ಟ್ ಯೂನಿಯನ್ ಘಟಕ ಯೂನಿಯನ್ ಜಿಲ್ಲಾ ಮತ್ತು ರಾಜ್ಯ ಸಮಿತಿಯ ನಿರ್ದೇಶನದಂತೆ ಹೈಕೋರ್ಟ್ ಮೊರೆ ಹೋಗಿತ್ತು. ಮಾಧ್ಯಮಗಳ ಪರವಾಗಿ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್ ಹೈಕೋರ್ಟಲ್ಲಿ ಈ ಬಗ್ಗೆ ವಾದ ಮಂಡಿಸಿದ್ದರು. ನ್ಯಾಯವಾದಿಗಳಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ವಹಿಸಿದ್ದರು.ಈ ಘಟನೆಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಮೇಲೆ ದಾಖಲಾದ ಎಫ್.ಐ.ಆರ್.ಮೇಲೆ ಹೈ ಕೋರ್ಟ್ ತಡೆಯಾಜ್ಞೆ ನೀಡಿರುವುದಾಗಿ ತಿಳಿದು ಬಂದಿದೆ.