ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಪ್ರಯುಕ್ತ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಈ ಬಾರಿ ಸುಳ್ಯದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ.ಈ.ಹೇಳಿದರು. ಅವರು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಸೆ. 5 ರಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಸುಳ್ಯ ತಾಲೂಕು ಶಿಕ್ಷಕರ ದಿನಾಚರಣೆಯ ಸಮಿತಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇದರ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸುಳ್ಯದ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನ ಪರಿವಾರಕಾನದಲ್ಲಿ ನಡೆಯಲಿದೆ. ರಾಜ್ಯದ ವಿಧಾನಸಭಾಧ್ಯಕ್ಷರಾದ ಯು.ಟಿ ಖಾದರ್ ಉಪಸ್ಥಿತಿಯಲ್ಲಿ ನಡೆಯಲಿದ್ದು, ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡುರಾವ್ ಉದ್ಘಾಟನೆ ಮಾಡಲಿದ್ದಾರೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಎಸ್. ಗೌರವ ಉಪಸ್ಥಿತರಿರಲಿದ್ದಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮರುಳ್ಯ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಲೋಕಸಭಾ ಸಂಸದರಾದ ನಳಿನ್ ಕುಮಾರ್ ಕಟೀಲ್, ಹಾಗೂ ರಾಜ್ಯಸಭೆ ಸಂಸದರಾದ ಡಿ.ವೀರೇಂದ್ರ ಹೆಗ್ಗಡೆ, ದ.ಕ.ಜಿಲ್ಲೆಯ ಶಾಸಕರಾದ ಡಾ. ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ಹರೀಶ್ ಪೂಂಜ, ಅಶೋಕ ಕುಮಾರ್ ರೈ, ಉಮನಾಥ ಎ. ಕೋಟ್ಯಾನ್, ಕರ್ನಾಟಕ ವಿಧಾನ ಪರಿಷತ್ ಶಾಸಕರುಗಳಾದ ಕೋಟಾ ಶ್ರೀನಿವಾಸ ಪೂಜಾರಿ, ಕೆ. ಹರೀಶ್ ಕುಮಾರ್, ಪ್ರತಾಪಸಿಂಹ ನಾಯಕ್ ಕೆ, ಬಿ.ಎಂ. ಫಾರೂಕ್,ಎಸ್. ಎಲ್. ಭೋಜೇಗೌಡ, ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿಗಳಾದ ಮಲ್ಲೆöÊ ಮುಹಿಲನ್ ಎಂ.ಪಿ., ದ.ಕ.ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಎಂ., ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಸಿಪ್ರಿಯನ್ ಮೊಂತೆರೋ ಪ್ರಾಂಶುಪಾರು ಹಾಗೂ ಪದನಿಮಿತ್ತ ಸಹ ನಿರ್ದೇಶಕರು ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇವರುಗಳ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಸೆ. 5 ರಂದು ಬೆಳಿಗ್ಗೆ 9.00 ರಿಂದ ಸುಳ್ಯ ತಾಲೂಕಿನ ವಿವಿಧ ವಿದ್ಯಾಸಂಸ್ಥೆಗಳು ಮತ್ತು ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಪೂ. 10.00 ರಿಂದ ಸಭಾ ಕಾರ್ಯಕ್ರಮ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ, ನಿವೃತ್ತ ಶಿಕ್ಷಕ/ಶಿಕ್ಷಕೇತರ ನೌಕರರಿಗೆ ಸನ್ಮಾನ, ಸ್ಕೌಟ್/ ಗೈಡ್ ವಿಭಾಗದ ಉತ್ತಮ ಶಿಕ್ಷಕರಿಗೆ, ಎಸ್.ಎಸ್.ಎಲ್.ಸಿ ಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಶೇ. 100 ಅಂಕ ಬಂದ ಶಾಲೆಗಳಿಗೆ ಸನ್ಮಾನ ನಡೆಯಲಿದೆ. ಮಧ್ಯಾಹ್ನ 1.00 ರಿಂದ ಶಿಕ್ಷಕರ ಯಕ್ಷಗಾನ ಒಕ್ಕೂಟ ಸುಳ್ಯ ಇವರಿಂದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕ.ರಾ.ಸರಕಾರಿ ನೌಕರರ ಸಂಘದ ಸುಳ್ಯ ಶಾಖೆಯ ಅಧ್ಯಕ್ಷ ತೀರ್ಥರಾಮ ಹೊಸೊಳಿಕೆ, ಶ್ರೀಮತಿ ನಳಿನಿ ಕಿರ್ಲಾಯ ಉಪಸ್ಥಿತರಿದ್ದರು.