ದ.ಕ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸುಳ್ಯ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸುಳ್ಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಇವರ ಸಹಯೋಗದಲ್ಲಿ ಪರಿಸರ ಜಾಗೃತಿಗಾಗಿ ಗಿಡ ನೆಡುವ “ಸಸ್ಯ ಶ್ಯಾಮಲಾ ಕಾರ್ಯಕ್ರಮ” ಸೆಪ್ಟೆಂಬರ್ 11 ರಂದು ಎಣ್ಮೂರು ಪ್ರೌಢಶಾಲೆಯಲ್ಲಿ ನಡೆಯಿತು. ಸಾಮಾಜಿಕ ಅರಣ್ಯ ಇಲಾಖೆಯ ಸಹಕಾರದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಚಾಲನೆ ನೀಡಿ ಪರಿಸರ ಕಾಳಜಿ ಬೆಳೆಸಿಕೊಳ್ಳಲು ಶಾಲಾ ಮಕ್ಕಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ಮುರುಳ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ, ಉಪಾಧ್ಯಕ್ಷರಾದ ಕುಮಾರಿ ಜಾನಕಿ ಎಸ್, DRFO ಶ್ರೀಮತಿ ಮಂಜುಳಾ , ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀ ಸೂಫಿ ಪೆರಾಜೆ, ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀ ಲಿಂಗಪ್ಪ ಬೆಳ್ಳಾರೆ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ ಸ್ವಾಗತಿಸಿದರು ,RFO ಶ್ರೀಮತಿ ಶೈಲಜಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಸಂತೋಷ್ ಮತ್ತು ಉಷಾ .ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಸುಮಿತ್ರಾ ಕೆ. ವಂದಿಸಿದರು.
- Sunday
- November 24th, 2024