ಸುಳ್ಯದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ಅ.3 ರಂದು ನಡೆಯಲಿರುವ ಗಾಂಧಿಸ್ಮೃತಿ ಕಾರ್ಯಕ್ರಮ ಹಾಗೂ ಜನಜಾಗೃತಿ ವೇದಿಕೆಯ ಜಿಲ್ಲಾ ಮಟ್ಟದ ಸಮಾವೇಶದ ಆಮಂತ್ರಣ ಪತ್ರವನ್ನು ಧರ್ಮಸ್ಥಳದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪದ್ಮನಾಭ ಶೆಟ್ಟಿ,
ಮಾಜಿ ಜಿಲ್ಲಾಧ್ಯಕ್ಷ ಎನ್.ಎ ರಾಮಚಂದ್ರ, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯ್ಸ್, ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಲೋಕನಾಥ್ ಆಮೇಚೂರ್,
ಜಿಲ್ಲಾ ನಿರ್ದೇಶಕ ಪ್ರವೀಣಕುಮಾರ್, ಸುಳ್ಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹೇಶ್ ರೈ ಮೇನಾಲ, ಭಜನಾ ಪರಿಷತ್ ನಿರ್ದೇಶಕ ಬೂಡು ರಾಧಾಕೃಷ್ಣ ರೈ, ತಾಲೂಕು ಯೋಜನಾಧಿಕಾರಿ ನಾಗೇಶ್ .ಪಿ ಉಪಸ್ಥಿತರಿದ್ದರು.