ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯದ ನೂತನ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನೆಯು ಸೆ. 30ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀವತ್ಸ, ಸದಸ್ಯರು ವ್ಯವಸ್ಥಾಪನಾ ಸಮಿತಿ ಕುಕ್ಕೆ ಶ್ರೀ ದೇವಾಲಯ ಸುಬ್ರಹ್ಮಣ್ಯ ಇವರು ವಹಿಸಿದ್ದರು. 2023-24 ನೇ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ದೀಪ ಬೆಳಗಿಸುವುದರ ಮೂಲಕ ಶ್ರೀ ಕೇಶವ ಬಂಗೇರ, ಕನ್ನಡ ಉಪನ್ಯಾಸಕರು ನಾರಾಯಣಗುರು ಕಾಲೇಜು ಮಂಗಳೂರು ಇವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಪದ್ಮನಾಭ ಶೆಟ್ಟಿಗಾರ್, ದೇವಳದ ಕಛೇರಿ ಅಧೀಕ್ಷಕರು ಮತ್ತು ಶಿವಸುಬ್ರಹ್ಮಣ್ಯ ಭಟ್, ದೇವಳದ ಕಚೇರಿಯಲ್ಲಿ ವಿದ್ಯಾಸಂಸ್ಥೆಗಳ ವಿಷಯ ನಿರ್ವಾಹಕರು ಇವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ದಿನೇಶ್.ಪಿ.ಟಿ , ಆಂತರಿಕ ಗುಣಮಟ್ಟ ಮತ್ತು ಭರವಸಾಕೋಶದ ಸಂಯೋಜಕರಾದ ಶ್ರೀಮತಿ ಲತಾ ಬಿ.ಟಿ, ರೇಗಪ್ಪ ಸುಬ್ರಹ್ಮಣ್ಯ, ವಿದ್ಯಾರ್ಥಿ ಪರಿಷತ್ತಿನ ಸಲಹೆಗಾರರಾದ ಪ್ರಸಾದ್.ಎನ್, ಸಹಸಲಹೆಗಾರರಾದ ಶ್ರೀ ರಾಮ್ ಪ್ರಸಾದ್ ಮತ್ತು ಶ್ರೀಮತಿ ಪ್ರಮೀಳಾ ಹಾಗೂ ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಸುಹಾಸ್.ಎಂ.ಜಿ, ಉಪಾಧ್ಯಕ್ಷೆ ಪೂಜಾ.ಎಂ, ಕಾರ್ಯದರ್ಶಿ ಕೌಶಿಕ್. ಕೆ.ವಿ, ಇವರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಪರಿಷತ್ತಿನ ಸಹ ಸಲಹೆಗಾರರಾದ ಶ್ರೀಮತಿ ಪ್ರಮೀಳ ಇವರು ವಿದ್ಯಾರ್ಥಿ ಪರಿಷತ್ತಿನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಹಳ್ಳಿ ಮದ್ದನ್ನು ನೀಡುತ್ತಿರುವ, ದೈವ ನರ್ತಕರಾದ ರೇಗಪ್ಪ ಸುಬ್ರಹ್ಮಣ್ಯ ಇವರನ್ನು ಮತ್ತು ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಾದ ಶ್ರಾವ್ಯ ಮುತ್ಲಾಜೆ, ಸಿಂಧೂರ, ಹಾಗೂ ಕೌಸಲ್ಯ ಇವರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿ ಪರಿಷತ್ತಿನ ಸಲಹೆಗಾರರಾದ ಪ್ರಸಾದ್.ಎನ್ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪರಿಷತ್ತಿನ ಉಪಾಧ್ಯಕ್ಷೆ ಪೂಜಾ ಎಂ ಸ್ವಾಗತಿಸಿ, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರಾದ ಸುಹಾಸ್ ಎಂ.ಜಿ ವಂದಿಸಿದರು. ಕಲ್ಪನಾ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ಪೂರ್ವ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.