ನವದೆಹಲಿ: ಈಗಾಗಲೇ ಚಲಾವಣೆಯಿಂದ ಹಿಂಪಡೆಯಲಾಗಿರುವ ಎರಡು ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಮರಳಿಸಲು ಅಥವಾ ವಿನಿಮಯ ಮಾಡಲು ನೀಡಲಾಗಿದ್ದ ಗಡುವನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಕ್ಟೋಬರ್ 7ರವರೆಗೆ ವಿಸ್ತರಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಆರ್ಬಿಐ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಬ್ಯಾಂಕ್ಗೆ ಮರಳಿಸಲು ಅಥವಾ ವಿನಿಮಯ ಮಾಡಲು ಈ ಹಿಂದೆ ನಿಗದಿಪಡಿಸಿದ್ದ ಅವಧಿಯೂ ಅಂತ್ಯಗೊಂಡಿದೆ. ಈ ಹಿಂದೆ ನೀಡಲಾಗಿದ್ದ ಗಡುವನ್ನು ಅಕ್ಟೋಬರ್ 7ರವರೆಗೆ ವಿಸ್ತರಿಸಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
- Friday
- November 22nd, 2024