ವರದಿ : ಉಲ್ಲಾಸ್ ಕಜ್ಜೋಡಿ
ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ, ಕೊಲ್ಲಮೊಗ್ರು ಗ್ರಾಮ ಗೌಡ ಸಮುದಾಯ ಸಮಿತಿ ಹಾಗೂ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇವುಗಳ ಸಹಭಾಗಿತ್ವದಲ್ಲಿ ಅ.07 ಶನಿವಾರದಂದು ಕೊಲ್ಲಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಹಾಗೂ ಡ್ರೈವಿಂಗ್ ಲೈಸನ್ಸ್ ನೋಂದಣಿ ಕಾರ್ಯಕ್ರಮವು ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡ್ರೈವಿಂಗ್ ಲೈಸನ್ಸ್ ನೋಂದಣಿಗೆ ರಕ್ತ ವರ್ಗೀಕರಣ ಪತ್ರ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ ಮತ್ತು ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಶಾಲಾ ದಾಖಲಾತಿ ಪತ್ರ ಹಾಗೂ 2 ಪಾಸ್ ಪೋರ್ಟ್ ಸೈಜ್ ಫೋಟೋಗಳನ್ನು ತರತಕ್ಕದ್ದು ಎಂದು ತಿಳಿಸಲಾಗಿದೆ.
ಅದೇ ರೀತಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಗಾಗಿ : ಆಧಾರ್ ನಲ್ಲಿ ಜನ್ಮದಿನಾಂಕ ಬದಲಾವಣೆ ಮಾಡಲು ಜನನ ಪ್ರಮಾಣ ಪತ್ರ, ಪಾಸ್ ಪೋರ್ಟ್, ಅಂಕಪಟ್ಟಿ, ಸರ್ವೀಸ್ ಫೋಟೋ ಐಡಿ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದನ್ನು ತರತಕ್ಕದ್ದು ಎಂದು ತಿಳಿಸಲಾಗಿದೆ.
ಆಧಾರ್ ನಲ್ಲಿ ಹೆಸರು ಬದಲಾವಣೆ ಮಾಡಲು ವಾಹನ ಚಾಲನಾ ಪ್ರಮಾಣ ಪತ್ರ, ಪಾಸ್ ಪೋರ್ಟ್, ಅಂಕಪಟ್ಟಿ, ಮದುವೆ ಪ್ರಮಾಣ ಪತ್ರ, ಪಾನ್ ಕಾರ್ಡ್, ರೇಷನ್ ಕಾರ್ಡ್, ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್, ವೋಟರ್ ಐಡಿ ಇವುಗಳಲ್ಲಿ ಯಾವುದಾದರೂ ಒಂದನ್ನು ತರತಕ್ಕದ್ದು ಎಂದು ತಿಳಿಸಲಾಗಿದೆ.
ಆಧಾರ್ ನಲ್ಲಿ ವಿಳಾಸ ಬದಲಾವಣೆ ಮಾಡಲು ಪಾಸ್ ಪೋರ್ಟ್, ಅಂಚೆ/ಬ್ಯಾಂಕ್ ಪಾಸ್ ಬುಕ್, ರೇಷನ್ ಕಾರ್ಡ್, ವೋಟರ್ ಐಡಿ, ಇನ್ಸೂರೆನ್ಸ್ ಪಾಲಿಸಿ, ವಾಸ್ತವ್ಯ ಪ್ರಮಾಣ ಪತ್ರ, ಮದುವೆ ಪ್ರಮಾಣ ಪತ್ರ, ಫೋಟೋ ಇರುವ ಪ್ರಮಾಣ ಪತ್ರ, ವಾಹನ ನೋಂದಣಿ ಇವುಗಳಲ್ಲಿ ಯಾವುದಾದರೂ ಒಂದನ್ನು ತರತಕ್ಕದ್ದು ಎಂದು ತಿಳಿಸಲಾಗಿದೆ.
ಅದೇ ರೀತಿ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಲು ಜನ್ಮ ದಾಖಲೆ, ತಂದೆ/ತಾಯಿಯ ಆಧಾರ್ ಕಾರ್ಡ್ ತರತಕ್ಕದ್ದು ಹಾಗೂ ತಂದೆ/ತಾಯಿ ಮಗುವಿನೊಂದಿಗೆ ಇರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ – ಅನಂತರಾಮ.ಯಂ : 9448843821
ಸತೀಶ್ ದೋಲನ : 9448921034
ಕೀರ್ತೀಶ್ ಬಾಳೆಬೈಲು : 8762755703
ಸುರೇಶ್ ಮಿತ್ತಮಜಲು : 9480530646
ರಾಮ.ಟಿ.ಸಿ(ಅಂಚೆ ಪಾಲಕರು ಗುತ್ತಿಗಾರು) : 9449593097 ಇವರುಗಳನ್ನು ಸಂಪರ್ಕಿಸಬಹುದಾಗಿದೆ.