ದಕ್ಷಿಣ ಕನ್ನಡ ಸೈನ್ಸ್ ಫೌಂಡೇಶನ್ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದಕ್ಷಿಣ ಕನ್ನಡ ಘಟಕ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಬೆಂಗಳೂರು ಹಾಗೂ ಲಯನ್ಸ್ ಕ್ಲಬ್ ಕಡಬ, ಇವುಗಳ ಜಂಟಿ ಆಶ್ರಯದಲ್ಲಿ ಸಂಚಾರಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನವಂಬರ್ 6 ಸೋಮವಾರದಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ನೆರವೇರಿಸಿದ ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಬೆಂಗಳೂರು ಇದರ ಎಜುಕೇಶನ್ ಆಫೀಸರ್ ಹೇಮರಾಜ್ ಮಾತನಾಡಿ ” ಇಂದಿನ ತಾಂತ್ರಿಕ ಯುಗದಲ್ಲಿ ನಾವು ಕೂಡ ವೇಗವಾಗಿ ಹೋಗಬೇಕಾಗುತ್ತದೆ .ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಮ್ಮ ಪ್ರೌಢ ಹಂತದಿಂದಲೇ ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ವಹಿಸಿ ತರಗತಿಯಲ್ಲಿ ಪಾಠ ಕೇಳುವುದರೊಂದಿಗೆ ಪ್ರಾಯೋಗಿಕವಾಗಿ ಅದರ ವಿವರಣೆಯನ್ನ ಹಾಗೂ ಮಾಹಿತಿಯನ್ನು ತಿಳಿದುಕೊಳ್ಳುವುದು ಅತ್ಯವಶ್ಯ ಎಂದರು “. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಡಬ ಲಯನ್ಸ್ ಕ್ಲಬ್ ನ ಅಧ್ಯಕ್ಷ ಗೋಪಾಲಕೃಷ್ಣ, ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಕೃಷ್ಣ ಭಟ್, ತಾಂತ್ರಿಕ ಸಹಾಯಕರಾದ ಚಂದ್ರ ,ಹಾಗೂ ದಿಲೀಪ್ ಜಟ್ಟಿ, ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಗಿರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಚಾರಿ ವಿಜ್ಞಾನ ಪ್ರದರ್ಶನವು ನವೆಂಬರ್6 ರಿಂದ ಡಿಸೆಂಬರ್ 5 ರವರೆಗೆ ನಿರಂತರವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಆಯ್ದ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ತಾಂತ್ರಿಕ ಮಾಹಿತಿಯನ್ನು ನೀಡುವುದಾಗಿದೆ. ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕ ಕೃಷ್ಣ ಭಟ್ ಸ್ವಾಗತಿಸಿದರು. ಸಹ ಶಿಕ್ಷಕ ಸುರೇಶ್ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಸಹ ಶಿಕ್ಷಕಿ ನಂದ ವಂದಿಸಿದರು. ತದನಂತರ ವಿದ್ಯಾರ್ಥಿಗಳಿಗೆ ವಿಜ್ಞಾನ ಪ್ರದರ್ಶನವನ್ನ ವೀಕ್ಷಿಸಲು ಅವಕಾಶ ಮಾಡಿಕೊಡಲಾಯಿತು .