ಆಲೆಟ್ಟಿ ಗ್ರಾಮ ಪಂಚಾಯತ್ ಗೆ ಇಂದು ಲೋಕಾಯುಕ್ತ ಅಧಿಕಾರಿಗಳು ಧಿಢೀರ್ ದಾಳಿ ನಡೆಸಿದ್ದು ಈ ಹಿಂದೆ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತಾಗಿ ದೂರುಗಳು ಸಲ್ಲಿಕೆಯಾಗಿದ್ದು ಇದರ ಬಗ್ಗೆ ಇದೀಗ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆನ್ನಲಾಗಿದೆ. ಈ ಹಿಂದೆ ಮಾಣಿಮರ್ಧು ಸೇತುವೆ ಕಾಮಗಾರಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂಬ ಸ್ಥಳೀಯರು ನೀಡಿದ ದೂರಿನ ಅನ್ವಯ ಲೋಕಾಯುಕ್ತ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ ಈ ಹಿಂದೆ ನೀಡಿದ ದೂರಿನ ಮೇರೆಗೆ ಬಂದಿದ್ದಾರೆ ಹಾಗೂ ನಮಗೆ ಅವರು ಮುಂದಿನ ದಿನಗಳಲ್ಲಿ ಬರಲು ಹೇಳಿದ್ದಾರೆ. ಅದು ಕಾನೂನಿನ ರೀತಿಯಲ್ಲಿ ನಡೆಯುತ್ತದೆ ಎಂದರು. ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದರು. ಈ ದಾಳಿಯ ಕುರಿತು ಇದೀಗ ನಾಗರೀಕರಲ್ಲಿ ಕುತೂಹಲ ಮೂಡಿಸಿದ್ದು, ವಿವರ ಇನ್ನಷ್ಟೆ ಲಭ್ಯವಾಗಬೇಕಿದೆ.
- Thursday
- November 21st, 2024