ಗ್ರಾಮ ಪಂಚಾಯತ್ ಗುತ್ತಿಗಾರು, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಗುತ್ತಿಗಾರು, ಮಂಗಳ ಕಲಾ ಸಾಹಿತ್ಯ ವೇದಿಕೆ(ರಿ.) ಬಡಗನ್ನೂರು, ಯಶಸ್ವಿ ನಾಗರಿಕ ಸೇವಾ ಸಂಘ ವಾಸುದೇವ ನಗರ ಕಾರ್ಕಳ(ರಿ.) ಇದರ ಸಂಯುಕ್ತಾಶ್ರಯದಲ್ಲಿ ನ.21 ಮಂಗಳವಾರದಂದು ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ನಡೆಯಿತು. ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ಮೂಕಮಲೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಆಹ್ವಾನಿತರಾದ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ನೆಲ್ಸನ್ ಕ್ಯಾಸ್ಟಲೀನೋ ಗ್ರಂಥಾಲಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಗ್ರಂಥಾಲಯ ಸಪ್ತಾಹದ ಅಂಗವಾಗಿ ನಡೆಸಿದ “ನನ್ನ ಮೆಚ್ಚಿನ ನೀತಿ ಕಥೆ ರಚನೆ ಮತ್ತು ಪ್ರಸ್ತುತ ಇರುವ ನನ್ನ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮುಂದೇನಾಗಬೇಕು” ಎಂಬ ವಿಷಯದ ಬಗ್ಗೆ ಬರೆದ ಪ್ರಬಂಧ ಸ್ಪರ್ಧೆಗೆ ಬಹುಮಾನ ನೀಡಿ ಅಭಿನಂದಿಸಲಾಯಿತು. ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಮಂಜುಳಾ ಮುತ್ಲಾಜೆ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ, ಕಾರ್ಯಕ್ರಮದ ಆಯೋಜಕರಾದ ಮುರಳೀಧರ.ಸಿ.ಹೆಚ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೇಲ್ವಿಚಾರಕರಾದ ಶ್ರೀಮತಿ ಪ್ರಪುಲ್ಲಾ ದೇವಚಳ್ಳ ಹಾಗೂ ಶ್ರೀಮತಿ ಸಾವಿತ್ರಿ ಮಂಡೆಕೋಲು ಭಾಗವಹಿಸಿದ್ದರು. ಪಂಚಾಯತ್ ವ್ಯಾಪ್ತಿಯ ಹಿರಿಯ ಗ್ರಂಥಾಲಯ ಸದಸ್ಯರಾದ ಡಿ.ಆರ್ ಉದಯಕುಮಾರ್ 30ಕ್ಕೂ ಅಧಿಕ ಕೃಷಿ ಪತ್ರಿಕೆಯನ್ನು ಪುಸ್ತಕ ಜೋಳಿಗೆ ಕಾರ್ಯಕ್ರಮದಡಿಯಲ್ಲಿ ಕೊಡುಗೆಯಾಗಿ ನೀಡಿದರು. ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರಾದ ಶ್ರೀಮತಿ ಮಿತ್ರಕುಮಾರಿ ಚಿಕ್ಮುಳಿ, ಎಂ.ಬಿ.ಕೆ, ಎಲ್.ಸಿ.ಆರ್.ಪಿ, ಪಶು ಸಖಿ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ, ಆಶಾ ಕಾರ್ಯಕರ್ತೆ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು, ಪಂಚಾಯತ್ ಸಿಬ್ಬಂದಿ ವರ್ಗ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ಎಲ್.ಸಿ.ಆರ್.ಪಿ ದಿವ್ಯ ಚತ್ರಪ್ಪಾಡಿ ಪ್ರಾರ್ಥಿಸಿದರು. ಪಿ.ಡಿ.ಒ ಪ್ರಾಸ್ತಾವಿಕ ಮಾತುಗಳಿಂದ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷ ಮೋಟ್ನೂರು ವರದಿ ವಾಚಿಸಿದರು. ಕಾರ್ಯಕ್ರಮದ ಆಯೋಜಕರು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು.(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- November 21st, 2024