ಸುಳ್ಯ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತದಾರರ ಸಾಕ್ಷರತಾ ಸಂಘ ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಮತದಾನದ ಸಾಕ್ಷರತೆಯ ಬಗ್ಗೆ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ಕಾಲೇಜಿನಲ್ಲಿ ಯೋಜಿಸಲಾಗಿದೆ.
ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ. ರೇವತಿ ನಂದನ್ ದೀಪರವರು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲೆ ದಯಾಮಣಿ.ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮತದಾರರ ಸಾಕ್ಷರತಾ ಸಂಘದ ಸಂಘಟಕರಾದ ದಾಮೋದರ. ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ನಿರ್ವಹಿಸಿದರು.
ಸ್ಪರ್ಧಾ ಕಾರ್ಯಕ್ರಮದಲ್ಲಿ ವಿವಿಧ ರೀತಿಯ ರಸಪ್ರಶ್ನೆ, ಪ್ರಬಂಧ ಮತ್ತು ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳಲ್ಲಿ ಸುಳ್ಯ ತಾಲೂಕಿನ ಎಲ್ಲಾ 12 ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.
ಕಾರ್ಯಕ್ರಮದ ಕೊನೆಗೆ ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣ ಕಲಾ. ಎ. ಎಸ್ ಸ್ವಾಗತಿಸಿ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್. ಎಚ್ ವಂದಿಸಿದರು.
ಸುಳ್ಯ ತಾಲೂಕಿನ ಎಲ್ಲಾ 12 ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಸಪ್ರಶ್ನೆ, ಪ್ರಬಂಧ ಮತ್ತು ಪೋಸ್ಟರ್ ಮೇಕಿಂಗ್ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ಸ್ವರ್ಣ ಕಲಾ. ಎ. ಎಸ್ ಸ್ವಾಗತಿಸಿ ಇತಿಹಾಸ ಉಪನ್ಯಾಸಕ ಪ್ರಸನ್ನ ಎನ್. ಎಚ್ ವಂದಿಸಿದರು.