ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಸುಳ್ಯ-2023 ಇದರ ಆಶ್ರಯದಲ್ಲಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮಡಪ್ಪಾಡಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಧುನಿಕ ಸುಳ್ಯದ ನಿರ್ಮಾತೃ ಡಾII ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತೋತ್ಸವದ ಸವಿನೆನಪಿಗಾಗಿ ನ.26 ರಂದು ಮಡಪ್ಪಾಡಿಯಲ್ಲಿ ಉಚಿತ ಬೃಹತ್ ಆರೋಗ್ಯ ಶಿಬಿರ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಮಡಪ್ಪಾಡಿ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಂ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೆವಿಜಿ ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು, ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ್, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಕೆವಿಜಿ ಮೆಡಿಕಲ್ ಕಾಲೇಜಿನ ಗೀತಾ ದೊಪ್ಪ, ಆಯುರ್ವೇದ ಕಾಲೇಜಿನ ಹರ್ಷಿತಾ ಪುರುಷೋತ್ತಮ, ಎಸ್.ಡಿ.ಎಂ.ಸಿ ಅಧ್ಯಕ್ಷ ಸಚಿನ್ ಬಳ್ಳಡ್ಕ, ಯುವಕ ಮಂಡಲದ ಅಧ್ಯಕ್ಷ ಕಿರಣ್ ಶೀರಡ್ಕ, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ದುಶ್ಯಂತ್ ಶೀರಡ್ಕ, ಮಹಿಳಾ ಮಂಡಲದ ಅಧ್ಯಕ್ಷೆ ಶಕುಂತಲಾ ಕೇವಳ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ವಾಣಿ ಮುಳುಗಾಡು, ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಎಂ.ಜಿ.ಲೋಕಯ್ಯ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಲೋಹಿತ್ ಬಾಳಿಕಳ, ಕೆವಿಜಿ ಸುಳ್ಯ ಹಬ್ಬ ಸಮಿತಿಯ ಗೌರವಾಧ್ಯಕ್ಷ ಶೈಲೇಶ್ ಅಂಬೆಕಲ್ಲು,ದಿನೇಶ್ ಮಡಪ್ಪಾಡಿ, ಕೋಶಾಧಿಕಾರಿ ಜನಾರ್ಧನ ನಾಯಕ್, ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಗುತ್ತಿಗಾರು ಲಯನ್ಸ್ ಕ್ಲಬ್ ಅಧ್ಯಕ್ಷ ಜಯರಾಮ ಕಡ್ಲಾರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಬಾಳಿಕಳರನ್ನು ಸನ್ಮಾನಿಸಲಾಯಿತು. ಸುಮಾರು 180 ಕ್ಕೂ ಮಿಕ್ಕಿ ಊರವರು ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಂಡರು.
ದಿನೇಶ್ ಮಡಪ್ಪಾಡಿ ಸ್ವಾಗತಿಸಿ, ಶಾಲಾ ಮುಖ್ಯಶಿಕ್ಷಕ ಜಗದೀಶ್ ವಂದಿಸಿದರು. ಶಿಕ್ಷಕರಾದ ಕುಶಾಲಪ್ಪ ಪಾರೆಪ್ಪಾಡಿ ನಿರೂಪಿಸಿದರು.