Ad Widget

ಸುಳ್ಯ: ಕನಕದಾಸ ಜಯಂತಿ ಆಚರಣೆಯ ವ್ಯವಸ್ಥೆಯ ಬಗ್ಗೆ ಅಧಿಕಾರಿಗಳಿಗೆ ಚಾಟಿ ಬೀಸಿದ ಎಂ ವೆಂಕಪ್ಪ ಗೌಡ



ರಾಷ್ಟೀಯ ಹಬ್ಬಗಳ ದಿನಾಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಶ್ರೀ ಕನಕದಾಸ ಜಯಂತಿ ಆಚರಣೆಯನ್ನು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರ ಪಂಚಾಯತ್ ಸದಸ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ವೆಂಕಪ್ಪ ಗೌಡರು ಮಾತನಾಡಿ ಸರಕಾರಿ ಕಾರ್ಯಕ್ರಮಗಳನ್ನು ಆಚರಿಸಲು ಕೆಲವೊಂದು ನಿಯಮಗಳಿವೆ. ಸ್ಥಳೀಯ ಜನಪ್ರತಿನಿಧಿಗಳನ್ನು, ಸಾಮಾಜಿಕ ಮುಖಂಡರುಗಳನ್ನು ಕರೆದು ಕಾರ್ಯಕ್ರಮ ನಡೆಸಬೇಕು. ಅಲ್ಲದೆ ಸರಕಾರಿ ಕಚೇರಿಗಳು, ಸಭಾಭವನ ಇದೆ ಅದರಲ್ಲಿ ಮಾಡಬೇಕು. ಆದರೆ ಇಂದಿನ ಕಾರ್ಯಕ್ರಮಕ್ಕೆ ಎಲ್ಲಾ ಜನಪ್ರತಿನಿಧಿಗಳಿಗೆ ತಿಳಿಸದೇ ನಡೆಸಿರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರಲ್ಲದೆ, ಈ ರೀತಿಯಾಗಿ ಧಾರ್ಮಿಕ ಸಂಸ್ಥೆಗಳಲ್ಲಿ ಕಾರ್ಯಕ್ರಮ ಆಯೋಜಿಸುವುದರಿಂದ ಎಲ್ಲಾ ನಾಗರಿಕರು, ಜನಪ್ರತಿನಿಧಿಗಳು ಭಾಗವಹಿಸಲು ಸಾಧ್ಯವಾಗುವುದಿಲ್ಲ, ಈ ರೀತಿ ಕಾರ್ಯಕ್ರಮ ನಡೆಸುವುದು ಮಹತ್ವಪೂರ್ಣ ಕಾರ್ಯಕ್ರಮಗಳ ಘನತೆಗೆ ತಕ್ಕುದಲ್ಲ. ಎಂದು ಮಾತಿನಲ್ಲೇ ಅಧಿಕಾರಿಗಳಿಗೆ ಚಾಟಿ ಬೀಸಿದರು.

. . . . . . . . .

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading