ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಾಲಯದ ಸಂಪೂರ್ಣ ಸಹಕಾರದೊಂದಿಗೆದಿನಾಂಕ 30.11.2023 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಯಿಲ ಇಲ್ಲಿ ನೆರೆವೇರಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ Dr. ದಿನೇಶ ಪಿ ಟಿ ಪ್ರಾಚಾರ್ಯರು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸುಬ್ರಹ್ಮಣ್ಯ ಇವರು ವಹಿಸಿದ್ದರು. ಗ್ರಾಮ ಪಂಚಾಯತ್ ಕೊಯ್ಲ ದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಸುಭಾಷ್ ಶೆಟ್ಟಿ , ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿದರು. ಮಹಾವಿದ್ಯಾಲಯದ ಐ.ಕ್ಯೂ. ಎ.ಸಿ ಸಂಯೋಜಕರಾದ ಶ್ರೀಮತಿ ಲತಾ B.T, ಪ್ರಾಥಮಿಕ ಶಾಲೆ ಕೊಯ್ಲಾದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ವಿಶ್ವನಾಥ ಗೌಡ,ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಗಳಾದ ಶ್ರೀಮತಿ ನಮಿತಾ, ರಾಷ್ಟ್ರೀಯ ಸೇವಾ ಯೋಜನೆಯಾ ಘಟಕದ ನಾಯಕರುಗಳಾದ, ನಿತೀಶ್ ಕೆ.ಯು, ನವ್ಯಶ್ರೀ ಪಿ.ಎಚ್, ಸಂದೀಪ್ ಕುಮಾರ್, ಹೃತಿಕ್ ಸಿಎ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ಹರ್ಷಿತ್ ಕುಮಾರ್, ಮಾಜಿ ಅಧ್ಯಕ್ಷರು, ಗ್ರಾಮ ಪಂಚಾಯತ್ ಕೊಯ್ಲ, ಶ್ರೀ ರವಿ ಪೂಜಾರಿ, ಉಪಾಧ್ಯಕ್ಷರು, ಗ್ರಾಮ ಪಂಚಾಯತ್ ಅಲಂಕಾರು, ಶ್ರೀ ಮಹೇಶ್, ಸಮೂಹ ಸಂಪನ್ಮೂಲ ವ್ಯಕ್ತಿ, ಶ್ರೀ ಸಂದೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಕೊಯ್ಲ, ಶ್ರೀ ರಾಮಕೃಷ್ಣ ಮಲ್ಲಾರ, ಅಧ್ಯಕ್ಷರು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕಡಬ ತಾಲೂಕು ಅತಿಥಿಗಳಾಗಿ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಶ್ರೀಮತಿ ಆರತಿ ಕೆ. ಸ್ವಾಗತಿಸಿದರು. ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಸುಜಾತ ಎಂ. ಧನ್ಯವಾದ ಸಮರ್ಪಿಸಿದರು. ಸ್ವಯಂ ಸೇವಕಿ ಕಲ್ಪನಾ ವೈ. ಕಾರ್ಯಕ್ರಮ ನಿರೂಪಿಸಿದರು.
- Thursday
- November 21st, 2024