Ad Widget

ನಡುಗಲ್ಲು : ಶಾಲಾ ವಾರ್ಷಿಕೋತ್ಸವ – ಶಾಸಕಿ ಕು. ಭಾಗೀರಥಿ ಮುರುಳ್ಯ ಉಪಸ್ಥಿತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಮತ್ತು ಹಿರಿಯ ವಿದ್ಯಾರ್ಥಿ ಸಂಘ ನಡುಗಲ್ಲು ಹಾಗೂ ಊರ ವಿದ್ಯಾಭಿಮಾನಿಗಳ ಸಹಭಾಗಿತ್ವದಲ್ಲಿ ನ.29 ರಂದು
ವಾರ್ಷಿಕೋತ್ಸವ ಸಮಾರಂಭ ನಡೆಯಿತು.

. . . . .

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಮಿತ್ರ ಮೂಕಮಲೆ, ಲೀಡರ್ ಶಿಪ್ ಎಕ್ಸಲೆನ್ಸ್ ಸೊಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಸಿ.ಇ.ಒ ಧೀರೇನ್ ಪರಮಲೆ, ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಗುತ್ತಿಗಾರು ಗ್ರಾ.ಪಂ ನ ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ಸುಳ್ಯ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಗುತ್ತಿಗಾರು ಗ್ರಾ.ಪಂ ಸದಸ್ಯರಾದ ವಿಜಯಕುಮಾ‌ರ್ ಚಾರ್ಮತ, ಹರೀಶ್ ಕೊಯಿಲ, ಪ್ರಮೀಳ ಎರ್ದಡ್ಕ, ಲೀಲಾವತಿ ಅಂಜೇರಿ, ಗುತ್ತಿಗಾರು ಗ್ರಾ.ಪಂ ಪಿಡಿಒ ಧನಪತಿ, ಶಾಲಾ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ ಪಾರೆಪ್ಪಾಡಿ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲುಪುಣಿ, ಶಾಲಾ ವಿದ್ಯಾರ್ಥಿ ನಾಯಕ ಮಾ|ಕೌಶಿಕ್ ಉಪಸ್ಥಿತರಿದ್ದರು. ಈ ವಾರ್ಷಿಕೋತ್ಸವ ಸಭಾ ಕಾರ್ಯಕ್ರಮದಲ್ಲಿ 18 ವರ್ಷಗಳ ಕಾಲ ಈ ಶಾಲೆಯಲ್ಲಿ ಶಿಕ್ಷಕ ರಾಗಿ ಸೇವೆ ಸಲ್ಲಿಸಿ ಗುತ್ತಿಗಾರು ಶಾಲೆಗೆ ವರ್ಗಾವಣೆಗೊಂಡ ಕುಶಾಲಪ್ಪ ಮತ್ತು ಶ್ರೀಮತಿ ಪೂರ್ಣಿಮಾ ಕುಶಾಲಪ್ಪ ದಂಪತಿಗಳನ್ನು ಹಾಗೂ ಸತತ 11 ವರ್ಷಗಳ ಕಾಲ ಎಸ್ ಡಿ ಎಂ ಸಿ ಯಲ್ಲಿದ್ದು ಅಭೂತಪೂರ್ವ ಅಭಿವೃದ್ಧಿ ಕೆಲಸ ಮಾಡಿ ಮೋಹನ ನಾಯ್ಕ ಚಾರ್ಮತ ಮತ್ತು ಶ್ರೀಮತಿ ಯಶೋದಾ ಮೋಹನ್ ನಾಯ್ಕ ದಂಪತಿಗಳನ್ನು ಸನ್ಮಾನಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಉಮೇಶ್ವರಿ ನೆಲ್ಲಿಪುಣಿ ಸ್ವಾಗತಿಸಿಸಿದರು. ಮುಖ್ಯೋಪಾಧ್ಯಾಯ ಚಂದ್ರಶೇಖರ್ ಪಾರೆಪ್ಪಾಡಿ ವರದಿ ವಾಚಿಸಿದರು. ಬಹುಮಾನಿತರ ಪಟ್ಟಿಯನ್ನು ಶಿಕ್ಷಕಿಯರಾದ ಕುಮಾರಿ ಸುಧಾರಾಣಿ, ಶ್ರೀಮತಿ ಸವಿತಾ,, ಶ್ರೀಮತಿ ಮೋಕ್ಷ ವಾಚಿಸಿದರು. ಹಿರಿಯ ವಿದ್ಯಾರ್ಥಿ ಗಳ ಊರ ವಿದ್ಯಾಭಿಮಾನಿಗಳ ಬಹುಮಾನದ ಪಟ್ಟಿಯನ್ನು ಕುಮಾರಿ ದಿಶಾ ಹಾಗೂ ಹರಿಶ್ಚಂದ್ರ ಕುಳ್ಳಂಪಾಡಿ ವಾಚಿಸಿದರು. ಹರೀಶ್ ಕೊಯಿಲ ವಂದಿಸಿದರು. ಶ್ರೀಮತಿ ವನಜಾಕ್ಷಿ ಸಹ ಶಿಕ್ಷಕಿ ಕಾರ್ಯಕ್ರಮ ನಿರೂಪಿಸಿದರು.

ಆರಂಭದಲ್ಲಿ ಶಾಲಾ ಆವರಣ ಗೋಡೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಬಳಿಕ ಗುತ್ತಿಗಾರು ಗ್ರಾ.ಪಂ ಅಧ್ಯಕ್ಷೆ ಸುಮಿತ್ರ ಮೂಕಮಲೆ ಅಕ್ಷರ ದಾಸೋಹ ಕೊಠಡಿ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಬಳಿಕ
ಅಂಗನವಾಡಿ ಪುಟಾಣಿಗಳಿಂದ, ಶಾಲಾ ಮಕ್ಕಳಿಂದ, ಹಿರಿಯ ವಿದ್ಯಾರ್ಥಿಗಳಿಂದ ವಿವಿಧ ವಿನೋದಾವಳಿಗಳು ನಡೆದ ನಂತರ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಮಂಡಳಿ ಎಡಮಂಗಲ ಮತ್ತು ಪ್ರಸಿದ್ಧ ಕಲಾವಿದರಿಂದ ತುಳು ಹಾಸ್ಯಮಯ ಯಕ್ಷಗಾನ “ಕಾರಿಂಜ ಕಾಂಜವ “. ಕಥಾನಕ ಮೂಡಿಬಂದಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!