ತೀವ್ರ ಉಸಿರಾಟದ ತೊಂದರೆಯಿಂದ ಸೋಮರ್ಪೇಟೆ ತಾಲೂಕಿನ ಕುಶಾಲನಗರ ಮೂಲದ ವ್ಯಕ್ತಿಯೋರ್ವರು ಆಸ್ಪತ್ರೆಗೆ ದಾಖಲಾಗಿ ಕೊರೋನ ವೈರಸ್ ಪಾಸಿಟಿವ್ ಇದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಕೊಡಗು ಜಿಲ್ಲೆಯಲ್ಲಿ ಕರೋನ ಮಹಾಮಾರಿಗೆ ಪ್ರಥಮ ವ್ಯಕ್ತಿ ಬಲಿಯಾಗಿದ್ದಾರೆ.
ಇವರನ್ನು ಜುಲೈ 4ರಂದು ಕುಶಾಲನಗರ ಖಾಸಗಿ ಆಸ್ಪತ್ರೆಯಿಂದ ಮಡಿಕೇರಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದುಬಂದಿದೆ. 58 ವರ್ಷ ಪ್ರಾಯವಾಗಿದ್ದ ಇವರು ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
- Wednesday
- November 27th, 2024