ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಜಾನುವಾರು ಸಂವರ್ಧನ ಮತ್ತು ತರಬೇತಿ ಕೇಂದ್ರ ಕೊಯ್ಲದಲ್ಲಿ ಮಲೆನಾಡು ಗಿಡ್ಡ ತಳಿಯ ಹೆಣ್ಣು ಕರು ಮತ್ತು ಪಡ್ಡೆಗಳನ್ನು ಸರಕಾರದ ಅಮೃತ ಸಿರಿ ಯೋಜನೆ ಅಡಿಯಲ್ಲಿ ರೈತರಿಗೆ ಪುಸ್ತಕ ಬೆಲೆಯ ಶೇಕಡ 25ರಷ್ಟು ವೆಚ್ಚದಲ್ಲಿ ನೀಡಲಾಗುತ್ತಿದೆ. ಆಸಕ್ತರು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವಿವಿಧ ಪಶು ಆಸ್ಪತ್ರೆ ಮತ್ತು ಪಶು ಚಿಕಿತ್ಸಾಲಯಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31ರ 2023 ಎಂದು ತಿಳಿಸಿದ್ದಾರೆ. ಒಂದು ಹಸುವಿಗೆ ಸುಮಾರು 500 ರಿಂದ 1000 ರೂಪಾಯಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ಪಶುವೈಧ್ಯಾಧಿಕಾರಿ ಡಾ. ನಿತಿನ್ ಪ್ರಭು ತಿಳಿಸಿದ್ದಾರೆ.
- Sunday
- November 24th, 2024