ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಎಂದು ಸುಳ್ಳು ಸುದ್ದಿ ವೈರಲ್ ಆಗಿದೆ.
ವೈರಲ್ ಆದ ಸುಳ್ಳು ಸುದ್ದಿಯಲ್ಲಿ ಜುಲೈ 8 ರಿಂದ 25 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ಜಿಲ್ಲೆಯ ವಿವಿಧ ಸಂಘಟನೆಗಳ ಒಕ್ಕೂಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು ಜಿಲ್ಲೆಯ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಆಟೋ ರಿಕ್ಷಾ ಕ್ಯಾಬ್ , ಹಾಗೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮಧ್ಯಾಹ್ನ 1.00 ಗಂಟೆಯವರೆಗೆ ಮಾತ್ರ ಲಭ್ಯವಿರಲಿದೆ. ಅಪರಾಹ್ನ 1.00 ಗಂಟೆಯಿಂದ ಸ್ವಯಂ ಪ್ರೇರಿತ ಲಾಕ್ಡೌನ್ ಮಾಡಲು ನಿರ್ಧರಿಸಲಾಗಿದ್ದು ಜಿಲ್ಲೆಯ ಜನತೆ , ವ್ಯಾಪಾರಸ್ಥರು , ಬಸ್ ಮಾಲಕರು , ಆಟೋ ರಿಕ್ಷಾ ಚಾಲಕರು , ಅಂಗಡಿಗಳ ಮಾಲಕರು ಹಾಗೂ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತ ಲಾಕ್ಡೌನ್ ಬೆಂಬಲಿಸಿ ಕರೊನಾ ವಿರುದ್ಧ ಹೋರಾಟದಲ್ಲಿ ಭಾಗಿಯಾಗಲು ಕೋರಲಾಗಿದೆ ಎಂದು ಸುಳ್ಳು ಸಂದೇಶ ನೀಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಧಿಕಾರಿ ಇಂತಹ ಯಾವುದೇ ಪ್ರಸ್ತಾಗಳಿಲ್ಲ ಎಂದು ತಿಳಿಸಿದ್ದಾರೆ.