ಸುಳ್ಯದ ನಿರ್ಮಾತೃ ದಿ. ಕೆವಿಜಿ ಅವರ 95 ನೇ ಜಯಂತ್ಯೋತ್ಸವ ಅಂಗವಾಗಿ ಎರಡು ದಿನಗಳ ಕೆವಿಜಿ ಸುಳ್ಯ ಹಬ್ಬಕ್ಕೆ ಶ್ರೀ ಚೆನ್ನಕೇಶವ ದೇವಾಲಯದ ಮುಂಬಾಗದ ವೇದಿಕೆಯಲ್ಲಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು.
ಡಾ| ಕುರುಂಜಿ ವೆಂಕಟ್ರಮಣ ಗೌಡರು ಅನೇಕ ವಿದ್ಯಾಸಂಸ್ಥೆಗಳನ್ನು ಕಟ್ಟಿ ಗ್ರಾಮೀಣ ಭಾಗದ ಯಾವುದೇ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ತೊಂದರೆಯಾಗದ ರೀತಿಯಾಗಿ ಬೆಳೆಸಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವಿದ್ಯಾರ್ಜನೆ ಮಾಡಿ ಹೊರಭಾಗದಲ್ಲಿ ಉನ್ನತ ಮಟ್ಟದಲ್ಲಿದ್ದಾರೆ. ಸುಳ್ಯದಲ್ಲಿಯೂ ಅನೇಕ ಮಂದಿ ಇದ್ದಾರೆ. ಇದೀಗ ಕೆವಿಜಿ ಹಬ್ಬದ ಮೂಲಕ ಸಾಧಕರನ್ನು ಗುರತಿಸಿ ಪ್ರೋತ್ಸಾಹಿಸುವ ಕೆಲಸ ಕೆವಿಜಿ ಸುಳ್ಯ ಹಬ್ಬ ಸಮಿತಿಯ ಮೂಲಕ ನಡೆಯುತ್ತಿದೆ. ಸಾಧನೆ ಮಾಡಿದಾಗ ಪ್ರೋತ್ಸಾಹ ಸಿಗುತ್ತದೆ” ಎಂದು ಮುಖ್ಯ ಅಥಿತಿಗಳಾಗಿ ಆಗಮಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ| ಕೆ.ವಿ.ಚಿದಾನಂದ ಹೇಳಿದರು. ಈ ಸಮಾರಂಭದಲ್ಲಿ ಬಾಲ ಪ್ರತಿಭೆ ಸೋನಾ ಅಡ್ಕಾರುರವರನ್ನು ಸನ್ಮಾನಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು.ಸುಳ್ಯ ಸ.ಪ್ರ.ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕೊಯಿಂಗಾಜೆ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಕೋಶಾಧಿಕಾರಿ ಜನಾರ್ಧನ ನಾಯ್ಕ, ಕ್ರೀಡಾ ಸಂಚಾಲಕ ಶರತ್ ಅಡ್ಕಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶರತ್ ಅಡ್ಕಾರ್ ಸ್ವಾಗತಿಸಿ, ಶ್ರೀಮತಿ ಚಂದ್ರಮತಿ ವಂದಿಸಿದರು. ಶ್ರೀಮತಿ ಜಲಜಾಕ್ಷಿ ಕುಕ್ಕುಜೆ ಕಾರ್ಯಕ್ರಮ ನಿರೂಪಿಸಿದರು.