ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆ ಸುಳ್ಯ, ತಾಲೂಕು ಕಛೇರಿ ಸುಳ್ಯ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಇವರ ಸಹಯೋಗದಲ್ಲಿ ಡಿಸೆಂಬರ್ 27ನೇ ಬುಧವಾರದಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂರ್ವಾಹ್ನ 9:30ಕ್ಕೆ “ರಕ್ತದಾನದಿಂದ ಆಗುವ ಪ್ರಯೋಜನಗಳು” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು “ರಕ್ತದಾನ ಶಿಬಿರ” ನಡೆಯಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕ.ರಾ.ಸ. ನೌಕರರ ಸಂಘ ಸುಳ್ಯ ಇದರ ಅಧ್ಯಕ್ಷರಾದ ತೀರ್ಥರಾಮ.ಹೆಚ್.ಬಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ತಹಶೀಲ್ದಾರರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಅಧ್ಯಕ್ಷರಾದ ಮಂಜುನಾಥ್.ಜಿ 2024ರ ಕ್ಯಾಲೆಂಡರ್ ಬಿಡುಗಡೆ ಮಾಡಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ರಾಜಣ್ಣ ಹಾಗೂ ಸುಳ್ಯ ಮೆಸ್ಕಾಂ ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಹರೀಶ್.ಕೆ ನಾಯಕ್ ಉಪಸ್ಥಿತರಿರಲಿದ್ದು, ಗೌರವ ಉಪಸ್ಥಿತರಾಗಿ ಕ.ರ.ಸ. ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಪೃಥ್ವಿಕುಮಾರ್.ಟಿ ಉಪಸ್ಥಿತರಿರಲಿದ್ದಾರೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಸಭಾಪತಿಗಳಾದ ಪಿ.ಬಿ ಸುಧಾಕರ ರೈ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ಕಾರ್ಯಾಗಾರವನ್ನು ನಡೆಸಿಕೊಡಲಿದ್ದಾರೆ.
- Thursday
- November 21st, 2024