ಗುತ್ತಿಗಾರು : ಶ್ರೀ ಅಯ್ಯಪ್ಪ ಸೇವಾ ಸಮಿತಿ ಕೃಷ್ಣನಗರ ಇದರ ವತಿಯಿಂದ ಸಾಮೂಹಿಕ ಶನೈಶ್ವರ ಪೂಜೆ ಹಾಗೂ ಗುಳಿಗ ಶಿವಗುಳಿಗ ಯಕ್ಷಗಾನ ಬಯಲಾಟ ಡಿ.31 ರಂದು ನಡೆಯಲಿದೆ.
ಗುತ್ತಿಗಾರಿನ ಶ್ರೀ ಕೃಷ್ಣ ಭಜನಾ ಮಂದಿರದ ವಠಾರದಲ್ಲಿ ಡಿ.31 ರಂದು ಪೂರ್ವಾಹ್ನ ಗಂಟೆ 8.00ರಿಂದ ಶ್ರೀ ಗಣಪತಿ ಹೋಮ, ಪೂ. 10 ರಿಂದ ಶನೈಶ್ವರ ಪೂಜೆ ಪ್ರಾರಂಭ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಧ್ಯಾಹ್ನ ಗಂಟೆ 01.00 ರಿಂದ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6.00 ರಿಂದ ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.
ರಾತ್ರಿ ಗಂಟೆ 7.00ರಿಂದ ನಡೆಯುವ ಸಭಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಅಯ್ಯಪ್ಪ ಸೇವಾ ಸಮಿತಿ ಅಧ್ಯಕ್ಷರಾದ ಸುರೇಶ್ ಕಂದ್ರಪ್ಪಾಡಿ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ವಳಲಂಬೆ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡ, ಕಡ್ತಲ್ಕಜೆ, ಮಾಜಿ ಜಿ.ಪಂ.ಸದಸ್ಯ ಭರತ್ ಮುಂಡೋಡಿ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಎಪಿಎಂಸಿ ಮಾಜಿ ನಿರ್ದೇಶಕರಾದ ಡಿ. ಆರ್. ಉದಯಕುಮಾರ್ ದೇರಪ್ಪಜ್ಜನಮನೆ, ಶ್ರೀ ಮುತ್ತಪ್ಪ ತಿರುವಪ್ಪ ದೈವಸ್ಥಾನದ ಆಡಳಿತ ಮೊಕ್ತೇಸರ ವೆಂಕಟ್ ವಳಲಂಬೆ, ಭಾರತೀಯ ರಬ್ಬರ್ ಬೋರ್ಡ್ ಸದಸ್ಯ ಮುಳಿಯ ಕೇಶವ ಭಟ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ಗುತ್ತಿಗಾರು ಪಿಡಿಓ ಧನಪತಿ ಪಂಚಾಯತ್, ಅಡ್ಪಂಗಾಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಧರ್ಮದರ್ಶಿ ಶಿವಪ್ರಕಾಶ್ ಗುರುಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಅಂದು ರಾತ್ರಿ ಗಂಟೆ 9.00 ರಿಂದ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ, ಸರಪಾಡಿ ಇವರಿಂದ ಮಾಣಿಲ ಶ್ರೀಧಾಮದ ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿಯವರ ಶುಭಾಶೀರ್ವಾದೊಂದಿಗೆ ಎಸ್.ಎ. ವರ್ಕಾಡಿ ವಿರಚಿತ ನೂತನ ಪ್ರಸಂಗ ಗುಳಿಗ ಶಿವಗುಳಿಗ ತುಳು ಯಕ್ಷಗಾನ ಬಯಲಾಟ ಗುತ್ತಿಗಾರಿನ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಸುರೇಶ್ ಕಂದ್ರಪ್ಪಾಡಿ ತಿಳಿಸಿದ್ದಾರೆ.