ಸುಳ್ಯ ಭಸ್ಮಡ್ಕ ಪಯಸ್ವಿನಿ ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಸುಳ್ಯದ ಕುರುಂಜಿಭಾಗ್ ನಲ್ಲಿರುವ ಆಪ್ಟಿಕಲ್ಸ್ ಶಾಪ್ ನಲ್ಲಿ ಕೆಲಸ ನಿರ್ವಹಿಸುತ್ತಿರುವ ಮಂಜೇಶ್ವರ ಮೂಲದ ಯುವಕ ತನ್ನ ಗೆಳೆಯರ ಜತೆಗೆ ಭಸ್ಮಡ್ಕ ಬಳಿ ಪಯಸ್ವಿನಿ ನದಿಗೆ ಸ್ನಾನಕ್ಕೆ ಇಳಿದಿದ್ದರು. ಮೂವರು ಯುವಕರ ಪೈಕಿ ಒಬ್ಬ ನೀರಿನಲ್ಲಿ ಕಣ್ಮರೆಯಾಗಿದ್ದು, ಯುವಕನಿಗಾಗಿ ನೀರಿನಲ್ಲಿ ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞರು ಹಾಗೂ ಪೋಲೀಸರು ಸ್ಥಳಕ್ಕೆ ಬಂದಿದ್ದರು.
ಮಂಜೇಶ್ವರ ಮೂಲದ ವ್ಯಕ್ತಿಯಾಗಿದ್ದು ಇವರು ಸುಳ್ಯದಲ್ಲಿ ಕೆಲಸ ಮಾಡುತ್ತಿದ್ದರು ಇವರಿಗೆ ಪತ್ನಿ ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನಿದ್ದಾನೆ.