*ಸುಳ್ಯ ವರ್ತಕರ ಸಂಘದ ಸಭೆ-ಅಗಲಿದ ಹಿರಿಯ ವರ್ತಕ ಸುಂದರ ಸರಳಾಯ ,ಡಾ. ಸುಗುಣ, ಸುಂದರಿ ಯವರಿಗೆ ಶ್ರದ್ಧಾಂಜಲಿ*

ಸುಳ್ಯ ತಾಲೂಕು ವರ್ತಕರ ಸಂಘದ ಸಭೆ ಸುಳ್ಯ ಎಪಿಎಂಸಿ ಸಭಾಂಗಣದಲ್ಲಿ ಇಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಿರೀಶ್ ಉಪಾಧ್ಯಕ್ಷ ಪ್ರಭಾಕರ್ ನಾಯರ್ ಕೋಶಾಧಿಕಾರಿ ಸುರೇಶ್ ಚಂದ್ರ ಕಮಿಲ ,ಉಪಸ್ಥಿತರಿದ್ದರು.

. . . . . . . . .


ಸಭೆಯಲ್ಲಿ  ಇತ್ತೀಚಿಗೆ ಅಗಲಿದ ಹಿರಿಯ ವರ್ತಕ ಸುಂದರ ಸರಳಾಯ ,ಡಾಕ್ಟರ್ ಸುಗುಣ ಗೌಡ ಸುಮಾರು 38 ವರ್ಷಗಳ ಕಾಲ ರೋಟರಿ ಶಾಲೆಯಲ್ಲಿ ಸೇವೆ ಸಲ್ಲಿಸಿದ ಸುಂದರಿ ಇವರಿಗೆ ಒಂದು ನಿಮಿಷದ ಮೌನಾಚರಣೆ ಮೂಲಕ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.ಕೋವಿಡ್ 19 ರ ಹಿನ್ನೆಲೆಯಲ್ಲಿ ಸುಳ್ಯದಲ್ಲಿ  ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸಭೆಯಲ್ಲಿ ಹಾಜರಿದ್ದ ಸದಸ್ಯರ ಅಭಿಪ್ರಾಯವನ್ನು ಸಂಗ್ರಹಿಸಿ ಯಥಾಸ್ಥಿತಿಯನ್ನು ಕಾಪಾಡುವಂತೆ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವರ್ತಕರನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಅಧ್ಯಕ್ಷ ಸುಧಾಕರ ರೈ ತಮ್ಮ ತಮ್ಮ ವ್ಯಾಪಾರ ಕ್ಷೇತ್ರದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಗ್ರಾಹಕರಿಗೆ ಸ್ಯಾನಿಟೈಸರ್ ಬಳಕೆಗೆ ಯೋಜಿಸುವುದು,ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವುದು, ಮೊದಲಾದ ಜಾಗೃತಿ ಕಾರ್ಯಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು. ಸಮಾಜದ ಹಿತದೃಷ್ಟಿ ಹಾಗೂ ವ್ಯಾಪಾರ ಕೇಂದ್ರಗಳಲ್ಲಿ ತಮ್ಮನ್ನು ತಾವು ಎಚ್ಚರಿಕೆಯಿಂದ  ನೋಡಿಕೊಳ್ಳುವುದು ಇವುಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯದರ್ಶಿ ಗಿರೀಶ್ ಸ್ವಾಗತಿಸಿ ಕೋಶಾಧಿಕಾರಿ ಸುರೇಶ್ ಚಂದ್ರ ಕಮಿಲ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading