ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಇಂದು ಪೂರ್ವಾಹ್ನ ಗಂಟೆ 9-45 ರಿಂದ 10-10ರ ಕುಂಭ ಲಗ್ನದ ಸುಮುಹೂರ್ತದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವಿಗೆ ನೂತನ ಬ್ರಹ್ಮರಥ ಮತ್ತು ಪಲ್ಲಕ್ಕಿ ಸಮರ್ಪಣೆಗೊಂಡಿತು.
ಈ ಸಂದರ್ಭ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಉಪಸ್ಥಿತರಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ. ವೆಂಕಟಕೃಷ್ಣ ರಾವ್, ಪಿ. ಜಗನ್ನಾಥ ರೈ, ನಾರಾಯಣ ಕೆ., ಶ್ರೀಮತಿ ಯಶೋದ ಎ. ಎಸ್., ಜಯಪ್ರಕಾಶ್ ರೈ ಬಿ., ದಾಮೋದರ ನಾಯ್ಕ, ಶ್ರೀಮತಿ ಭಾಗ್ಯಲಕ್ಷ್ಮೀ ಮತ್ತು ಸಿಬ್ಬಂದಿ ವರ್ಗ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಆ ಬಳಿಕ ದೇವಸ್ಥಾನದಲ್ಲಿ ಉಗ್ರಾಣ ಮುಹೂರ್ತ ನೆರವೇರಿತು.
ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಬ್ರಹ್ಮ ರಥೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನ 3.00 ಗಂಟೆಯಿಂದ ವಿಶೇಷ ಕುಣಿತ ಭಜನೆ, ಚೆಂಡೆ ವಾದನ, ಪೂರ್ಣ ಕುಂಭ ಕಳಶ, ವಿವಿಧ ವೇಷ- ಭೂಷಣಗಳು,ಆಕರ್ಷಕ ಗೊಂಬೆ ವೇಷಗಳೊಂದಿಗೆ
ವೈಭವದ ಶೋಭಾಯಾತ್ರೆಯ ಮೂಲಕ ದೇವಾಲಯಕ್ಕೆ ಹಸಿರುವಾಣಿ ಸಮರ್ಪಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ, ರಾತ್ರಿ ಗಂಟೆ 7.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ, ಶ್ರೀ ಭೂತ ಬಲಿ ನಡೆಯಲಿದೆ. ರಾತ್ರಿ ಗಂಟೆ 8.00ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ “ಬೊಳ್ಳಿಮಲೆತ ಶಿವಶಕ್ತಿಲ್” ಪ್ರದರ್ಶನಗೊಳ್ಳಲಿದೆ.