Ad Widget

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ- ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡ ಜಾತ್ರೋತ್ಸವ

ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಇಂದು ರಾತ್ರಿ ದೇವತಾ ಪ್ರಾರ್ಥನೆ ಬಳಿಕ ಧ್ವಜಾರೋಹಣದೊಂದಿಗೆ ವಿದ್ಯುಕ್ತವಾಗಿ ಆರಂಭಗೊಂಡಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಧ್ವಜಾರೋಹಣ ನೆರವೇರಿತು. ಈ ಸಂದರ್ಭದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳೀನ್ ಕುಮಾರ್ ಕಟೀಲು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ. ವೆಂಕಟಕೃಷ್ಣ ರಾವ್, ಪಿ. ಜಗನ್ನಾಥ ರೈ, ನಾರಾಯಣ ಕೆ., ಶ್ರೀಮತಿ ಯಶೋದ ಎ. ಎಸ್., ಜಯಪ್ರಕಾಶ್ ರೈ ಬಿ., ದಾಮೋದರ ನಾಯ್ಕ, ಶ್ರೀಮತಿ ಭಾಗ್ಯಲಕ್ಷ್ಮೀ ಮತ್ತು ಸಿಬ್ಬಂದಿ ವರ್ಗ ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . . . .

ದೇವಸ್ಥಾನದಲ್ಲಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ ಹಾಗೂ ಶ್ರೀ ಭೂತ ಬಲಿ ನಡೆಯಲಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading