ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ವೈಭವದ ಬ್ರಹ್ಮರಥೋತ್ಸವ ನಡೆಯಲಿದೆ. ಇಂದು ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದ್ಬು, ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ಭಂಡಾರ ಬಂದು ಶ್ರೀ ದೇವರ ಬ್ರಹ್ಮರಥೋತ್ಸವ ನೆರವೇರಲಿದೆ. ತದನಂತರ ಪೆರುವಾಜೆ ಬೆಡಿ ಪ್ರದರ್ಶನವಾಗಲಿದೆ. ರಾತ್ರಿ ಗಂಟೆ 10.30ಕ್ಕೆ ಮಹಾಪೂಜೆ, ಶಯನೋತ್ಸವ, ಕವಾಟ ಬಂಧನ ನೆರವೇರಲಿದೆ.
ದಿನಾಂಕ 20-01-2024ನೇ ಶನಿವಾರ ಬೆಳಗ್ಗೆ ಗಂಟೆ 7.00ಕ್ಕೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ,
ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ನಂತರ ಉಳ್ಳಾಕುಲು, ಮೈಷಂತಾಯ, ಶ್ರೀ ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ದೈವದ ಭಂಡಾರ ತೆಗೆಯುವುದು..ದಿನಾಂಕ 21-01-2024ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 7.00ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಿಗ್ಗೆ ಗಂಟೆ 6.00ಕ್ಕೆ ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ರಿಂದ ಶ್ರೀ ದೇವರಿಗೆ ಸಂಪ್ರೋಕ್ಷಣೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿರುವುದು. ಮಧ್ಯಾಹ್ನ ಗಂಟೆ 12.15ರಿಂದ ಶ್ರೀ ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ನೇಮೋತ್ಸವ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 7.00ಕ್ಕೆ ಶ್ರೀ ಕಲ್ಲುರ್ಟಿ, ಕಲ್ಕುಡ ದೈವದ ನೇಮ ನಡಾವಳಿ ಜರುಗಲಿರುವುದು.