Ad Widget

ಇತಿಹಾಸ ಪ್ರಸಿದ್ಧ ಪೆರುವಾಜೆ ಜಾತ್ರೋತ್ಸವ: ಬ್ರಹ್ಮರಥೋತ್ಸವ, ಪೆರುವಾಜೆ ಬೆಡಿ ಪ್ರದರ್ಶನ

ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ

. . . . . . . . .

ರಥೋತ್ಸವ ಕಣ್ತುಂಬಿಕೊಂಡು ಪುಳಕಿತರಾದ ಸಹಸ್ರ ಸಹಸ್ರ ಭಕ್ತಾದಿಗಳು

. . . . . . .

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು(ಜ.19) ಶತಮಾನಗಳ ಭಕ್ತಾದಿಗಳ ಅಭೀಷ್ಟದಂತೆ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ನಡೆಯಿತು. ಶತಮಾನಗಳ ಬಳಿಕ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಊರ-ಪರವೂರ ಸಾವಿರಾರು ಭಕ್ತಾದಿಗಳು ರಥಾರೂಢರಾದ ಶ್ರೀ ಜಲದುರ್ಗಾದೇವಿಯ ದರ್ಶನ ಪಡೆದು ಕೃತಾರ್ಥರಾದರು. ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ಭಂಡಾರ ಬಂದು ಶ್ರೀ ದೇವರ ಬ್ರಹ್ಮರಥೋತ್ಸವ ನೆರವೇರಿತು. ತದನಂತರ ಪೆರುವಾಜೆ ಬೆಡಿ ನಡೆಯಿತು. ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು, ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು, ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳೀನ್ ಕುಮಾರ್ ಕಟೀಲು, ಶಾಸಕಿ ಕು|ಭಾಗೀರಥಿ ಮುರುಳ್ಯ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಪದ್ಮನಾಭ ಶೆಟ್ಟಿ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ. ವೆಂಕಟಕೃಷ್ಣ ರಾವ್, ಪಿ. ಜಗನ್ನಾಥ ರೈ, ನಾರಾಯಣ ಕೆ., ಶ್ರೀಮತಿ ಯಶೋದ ಎ. ಎಸ್., ಜಯಪ್ರಕಾಶ್ ರೈ ಬಿ., ದಾಮೋದರ ನಾಯ್ಕ, ಶ್ರೀಮತಿ ಭಾಗ್ಯಲಕ್ಷ್ಮೀ, ದೇವಸ್ಥಾನದ ಕಛೇರಿ ವ್ಯವಸ್ಥಾಪಕ ವಸಂತ ಪೆರುವಾಜೆ ಮತ್ತು ಸಿಬ್ಬಂದಿ ವರ್ಗ ಹಾಗೂ ಊರ ಪರವೂರ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

ಬಳಿಕ ಮಹಾಪೂಜೆ, ಶಯನೋತ್ಸವ, ಕವಾಟ ಬಂಧನ ನೆರವೇರಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading