ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ರವಿವಾರ ದೈವಗಳ ನೇಮ ನಡೆಯಿತು.
ಜ.21 ರಂದು ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮ, ಪ್ರಸಾದ ವಿತರಣೆ ನಡೆಯಿತು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು. ನಂತರ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.
ಈ ಸಂದರ್ಭದಲ್ಲಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕಿ ಭಾಗೀರಥಿ ಮುರುಳ್ಯ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಪ್ರಧಾನ ಅರ್ಚಕ ಶ್ರಿನಿವಾಸ ಹೆಬ್ಬಾರ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ವ್ಯವಸ್ಥಾಪನ ಸಮಿತಿ ಸದಸ್ಯರಾದ ಪಿ. ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ ಪೆರುವಾಜೆ, ದಾಮೋದರ ನಾಯ್ಕ ಪೆಲತ್ತಡ್ಕ, ನಾರಾಯಣ ಕೊಂಡೆಪ್ಪಾಡಿ, ಜಗನ್ನಾಥ ರೈ, ಭಾಗ್ಯಲಕ್ಷ್ಮಿ, ಯಶೋದ ಎ,ಎಸ್., ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಶ್ರೀ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ಪೆರುವಾಜೆ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
ಆಭರಣ ಅರ್ಪಣೆ
ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಸುಮಾರು 8 ಲಕ್ಷ ವೆಚ್ಚದಲ್ಲಿ ಶ್ರೀ ದೇವಿಗೆ ಸ್ವರ್ಣದ ಸತ್ತಿಗೆ, ಕಲ್ಕುಡ ದೈವಕ್ಕೆ ಬೆಳ್ಳಿಯ ತಲೆಪಟ್ಟ, ಕಲ್ಲುರ್ಟಿ ದೈವಕ್ಕೆ ಸ್ವರ್ಣದ ಹೂ, ವ್ಯಾಘ್ರ್ಯ ಚಾಮುಂಡಿಗೆ ಬೆಳ್ಳಿಯ ಕೋರೆ ದಾಡೆಯನ್ನು ಜ.20 ರಂದು ರಾತ್ರಿ ಸಮರ್ಪಣೆ ಮಾಡಲಾಯಿತು. ಕ್ಷೇತ್ರದ ತಂತ್ರಿ ಕೆಮ್ಮಿಂಜೆ ಕಾರ್ತಿಕ್ ತಂತ್ರಿ ಮೂಲಕ ವ್ಯವಸ್ಥಾಪನ ಸಮಿತಿ ಹಸ್ತಾಂತರಿಸಿತು.