Ad Widget

ಶ್ರೀರಾಮನ ಪ್ರಾಣಪ್ರತಿಷ್ಠೆ ಅಂಗವಾಗಿ ರೆಂಜಾಳ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ – ಕರಸೇವಕರಿಗೆ ಸನ್ಮಾನ

ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಅಯೋಧ್ಯಾ ಶ್ರೀ ರಾಮದೇವರ ಪ್ರತಿಷ್ಠಾಪನೆಯ ಅಂಗವಾಗಿ ಬೆಳಿಗ್ಗೆ 9.30 ರಿಂದ 11.15 ರತನಕ ಶ್ರೀ ಶಿವಪಂಚಾಕ್ಷರಿ ಭಜನಾ ಮಂಡಳಿ ರೆಂಜಾಳ ಇದರ ಸದಸ್ಯರಿಂದ ಭಜನಾ ಕಾರ್ಯಕ್ರಮ, ನಂತರ ಪ್ರೋಜೆಕ್ಟರ್ ಮೂಲಕ ಅಯೋಧ್ಯಾ ಶ್ರೀ ರಾಮದೇವರ ಪ್ರತಿಷ್ಠಾಪನೆಯ ನೇರಪ್ರಸಾರವನ್ನು ವೀಕ್ಷಿಸಲಾಯಿತು. ಅಯೋಧ್ಯಾ ಕರಸೇವಕರಾದ ಚಂದ್ರಶೇಖರ ರಾವ್ ಆಕಿರೆಕಾಡು, ಲೋಕಯ್ಯ ಗೌಡ ಪರ್ಪುನಗುಂಡಿ,ಗೋಪಾಲ ಗೌಡ ಕಟ್ಟದಬರಿಯವರನ್ನು ಶ್ರೀದೇವಳದ ವತಿಯಿಂದ ಗೌರವಿಸಲಾಯಿತು. ಮಧ್ಯಾಹ್ನ ಶ್ರೀ ದೇವರಿಗೆ ವಿಶೇಷ ಪೂಜೆ ಹಾಗೂ ಆಗಮಿಸಿದ ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಶ್ರೀದೇವಳದ ವಿವಿಧ ಸಮಿತಿಯ ಸದಸ್ಯರುಗಳು,ಶಾಸ್ತಾವು ಯುವಕ ಮಂಡಲದ ಸದಸ್ಯರುಗಳು,ವಿಶ್ವಹಿಂದೂ ಪರಿಷದ್ ಬಜರಂಗದಳ ವೀರ ಸಾವರ್ಕರ್ ಶಾಖೆ ರೆಂಜಾಳ ಇದರ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading