Ad Widget

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ: ಧಾರ್ಮಿಕ ಸಭಾ ಕಾರ್ಯಕ್ರಮ

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಅತ್ಯಂತ ವೈಭವದಿಂದ ಜರುಗುತ್ತಿದ್ದು, ಜ.28ರಂದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷ ಚೆನ್ನಪ್ಪ ಗೌಡ ಕಜೆಮೂಲೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ವಿಶ್ರಾಂತ ಅಧ್ಯಾಪಕರಾದ ಸದಾಶಿವ ಭಟ್ ಜೋಗಿಬೆಟ್ಟು ಭಾಗವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಾಸಕಿ ಕು. ಭಾಗೀರಥಿ ಮುರುಳ್ಯ ಭಾಗಿಯಾಗಿದ್ದರು. ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು, ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ವಿಶ್ವಸ್ಥರಾದ ಎನ್ ವಿಶ್ವನಾಥ ರೈ ಕಳಂಜಗುತ್ತು, ಶೀನಪ್ಪ ಗೌಡ ತೋಟದಮೂಲೆ, ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸಪ್ತಗಿರಿ ಪುರಂದರ ಗೌಡ, ಅಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜಾತ್ರೋತ್ಸವದ ಯಶಸ್ಸಿಗೆ ಸಹಕರಿಸಿದ ವಿವಿಧ ಸಂಘ ಸಂಸ್ಥೆಗಳನ್ನು ಗೌರವಿಸಲಾಯಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಸದಸ್ಯರಾದ ರಾಮ್ ಪ್ರಸಾದ್ ಕಾಂಚೋಡು ಪ್ರಸ್ತಾವನೆಗೈದು ಸ್ವಾಗತಿಸಿದರು. ಜಾತ್ರೋತ್ಸವ ಸಮಿತಿಯ ಅಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ ವಂದಿಸಿದರು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿಯ ಕಾರ್ಯದರ್ಶಿ ಪ್ರಶಾಂತ್ ಕಿಲಂಗೋಡಿ ಕಾರ್ಯಕ್ರಮ ನಿರೂಪಿಸಿದರು.

. . . . . . . . .

ಸಭಾ ಕಾರ್ಯಕ್ರಮದ ಬಳಿಕ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮರ್ಯಾದಾ ಪುರುಷೋತ್ತಮ ಯಕ್ಷಗಾನ ಬಯಲಾಟ ನಡೆಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.

. . . . . . .

ಜ. 29 ಸೋಮವಾರ ಜಾತ್ರೋತ್ಸವದ ಕೊನೆಯ ದಿನವಾಗಿದ್ದು, ಬೆಳಿಗ್ಗೆ 7.30ಕ್ಕೆ ತಂಟೆಪಾಡಿ ಶಿರಾಡಿ ದೈವದ ಭಂಡಾರ ಹೊರಡುವುದು, ಬೆಳಿಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಬಂಡಾರ ಹೊರಡುವುದು ಮತ್ತು ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಟು ಕಲ್ಲಮಾಡದಲ್ಲಿ ಮೂರು ದೈವಗಳ ಕಾಲಾವಧಿ ನೇಮ(ತಿರ್ತನೇಮೊ) ನಡೆಯಲಿರುವುದು. ಬಳಿಕ ಬೂಳ್ಯ ವಿತರಣೆ ನಡೆಯಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ಬಳಿಕ 2.30ರಿಂದ ಕಲ್ಲಮಾಡದಲ್ಲಿ ಶಿರಾಡಿ ದೈವದ ದೊಂಪದ ಬಲಿನೇಮ ನಡೆದು ಮಾರಿ ಹೊರಡಲಿದೆ. ಸಂಜೆಯ ವೇಳೆ ಬೆಳ್ಳಾರೆ ಸಮೀಪದ ತಂಬಿನಮಕ್ಕಿಯಲ್ಲಿ ಗೌರಿಹೊಳೆಯ ಸಮೀಪ ಬಲಿಸಮರ್ಪಣೆಯಾಗಿ ನಾಲ್ಕುದಿನಗಳ ಅಯ್ಯನಕಟ್ಟೆ ಜಾತ್ರೆ ಸಂಪನ್ನಗೊಳ್ಳಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading