ಸುಳ್ಯ ಪುತ್ತೂರು ರಸ್ತೆಯಾದ ಜಾಲ್ಸೂರು ಎಂಬಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿ ವ್ಯಕ್ತಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದ ಘಟನೆ ಡಿ.28ರಂದು ಮಧ್ಯಾಹ್ನ ಸಂಭವಿಸಿದೆ.
ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ ಎಂಬವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಬೈಕ್ ಪುರುಷೋತ್ತಮ ಅವರಿಗೆ ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯರು ಸೇರಿ ರಿಕ್ಷಾದಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ವೈದ್ಯರ ಸಲಹೆಯಂತೆ ಅಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ. ಇವರನ್ನು ಮಂಗಳೂರಿಗೆ ಕೊಂಡೊಯ್ಯುವ ವೇಳೆಗೆ ಬೈಕ್ ಸವಾರನು ಜೊತೆಯಲ್ಲಿ ತೆರಳಿದ್ದರು ಎಂದು ಹೇಳಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.