Ad Widget

ಬೆಳ್ಳಾರೆ : ಸುಲಿಗೆ ಪ್ರಕರಣ ಭೇಧಿಸಿದ ಪೊಲೀಸರು – ಆರೋಪಿಗಳ ಬಂಧನ

ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಜ. 11ರಂದು ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

. . . . .

ಈ ಆರೋಪಿಗಳ ಶೀಘ್ರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ತನಿಖಾ ತಂಡ ಶೀಘ್ರವಾಗಿ ಆರೋಪಿಗಳ ಪತ್ತೆ ಮಾಡಿದ್ದು, ಮುಕ್ವೆ, ನರಿಮೊಗರು ಗ್ರಾಮ, ಪುತ್ತೂರು ನಿವಾಸಿ ನೌಶಾದ್ ಬಿ ಎ (36) ಮತ್ತು ಸುಲಿಗೆಗೆ ಸಹಕರಿಸಿದ ಉದ್ಯಾವರ, ಕಾಸರಗೋಡು, ಕೇರಳ ನಿವಾಸಿ ಚಂದ್ರಮೋಹನ್ (42) ಎಂಬವರುಗಳನ್ನು ವಶಕ್ಕೆ ಪಡೆದು, ಸದ್ರಿ ಆರೋಪಿಗಳಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ 1,00,000/- ಮೌಲ್ಯದ ಸ್ಕೂಟರನ್ನು ಸ್ವಾಧೀನಪಡಿಸಿಕೊಂಡಿರುತ್ತಾರೆ.
ಆರೋಪಿಗಳ ಪತ್ತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ. ಬಿ ರಿಷ್ಯಂತ್ ಐ ಪಿ ಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಧರ್ಮಪ್ಪ ಕೆ ಎಸ್ ಪಿ ಎಸ್ ಮತ್ತು ರಾಜೇಂದ್ರ ಕೆಎಸ್‌ಪಿಎಸ್ ರವರುಗಳ ಮುಂದಾಳತ್ವದಲ್ಲಿ, ಅರುಣ್ ನಾಗೇಗೌಡ, ಪೊಲೀಸ್ ಉಪಾಧೀಕ್ಷಕರು ಪುತ್ತೂರು ಉಪವಿಭಾಗರವರ ನೇತೃತ್ವದ, ಸುಳ್ಯ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ರವರು, ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರುಗಳಾದ ಸಂತೋಷ್ ಬಿ ಪಿ ರವರು ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತನಿಖಾ ತಂಡಗಳು ಕಾರ್ಯಾಚರಿಸಿರುತ್ತದೆ. ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ರವರುಗಳು ಕಾರ್ಯನಿರ್ವಹಿಸಿದ್ದರು.
ಈ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸಿದ್ದು, ಸಾರ್ವಜನಿಕ ವಲಯದಲ್ಲಿಯೂ ಮೆಚ್ಚುಗೆ ವ್ಯಕ್ತವಾಗಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!