
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರ ಗುಂಪು ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿ ಪರಾರಿಯಾದ ಘಟನೆ ಫೆ.8 ರಂದು ಕೊಡಗು ಸಂಪಾಜೆಯ ಬೈಲಿನ ಕನ್ಯಾನ ವಿಜಯ ಕುಮಾರ್ ಅವರ ಮನೆಯಲ್ಲಿ ನಡೆದಿದೆ.
ಬೆಳಿಗ್ಗೆ ಕಲ್ಲುಗುಂಡಿಯ ತಮ್ಮ ಅಂಗಡಿಗೆ ಹೋಗಿ ಸಂಜೆ ವೇಳೆ ಮನೆಗೆ ಹಿಂದಿರುಗಿ ನೋಡಿದಾಗ ಬಟ್ಟೆ ಗಳು ಚೆಲ್ಲಾಪಿಲ್ಲಿಯಾಗಿತ್ತು. ಕೂಡಲೇ ಸ್ಥಳೀಯರಿಗೆ ವಿಷಯ ತಿಳಿಸಲಾಗಿದ್ದು, ಸಂಪಾಜೆ ಪೊಲೀಸರಿಗೆ ಮಾಹಿತಿ ತಿಳಿಸಲಾಗಿದೆ. 40 ಗ್ರಾಂ ಚಿನ್ನಾಭರಣ ಮತ್ತು 20ಸಾವಿರ ಮೌಲ್ಯದಹಣ , ಉಂಗುರ ಕಳ್ಳ ತನವಾಗಿದೆ. ಸ್ಥಳಕ್ಕೆ ಮಡಿಕೇರಿ ಪೊಲೀಸ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ, ಕ್ರೈಂ ಶ್ರೀನಿವಾಸಲು, ಸಿಬ್ಬಂದಿ ರಮೇಶ್, ಮಧು, ಬಸವರಾಜ್, ನಾಗರಾಜ್ ಬೆರಳಚ್ಚು ತಜ್ಞರು , ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಲಾಗಿದೆ.