ಸುಳ್ಯ ತಾಲೂಕಿನ ಹಲವೆಡೆ ಫೆ. 17 ರಿಂದ ಫೆ.21 ರವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯುತ್ತಿದ್ದು, ಇದರ ಅಂಗವಾಗಿ ಫೆ. 20ರಂದು ಪೂರ್ವಾಹ್ನ 11 ಗಂಟೆಗೆ ಸುಳ್ಯದ ಕೆವಿಜಿ ಪುರಭವನದಲ್ಲಿ ವಿವಿಧ ಸರಕಾರಿ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಂವಿಧಾನ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಖ್ಯಾತ ನ್ಯಾಯವಾದಿ, ಚಿಂತಕ ಸುಧೀರ್ ಕುಮಾರ್ ಮುರೋಳ್ಳಿಯವರು ಭಾಗವಹಿಸಿ, ಸಂವಿಧಾನದ ಅರಿವು ಮೂಡಿಸಲಿದ್ದಾರೆ ಎಂದು ತಹಶೀಲ್ದಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Friday
- April 4th, 2025