ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸುಳ್ಯದ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ವಿದ್ಯಾರ್ಥಿನಿ ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದರು ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು ಅಲ್ಲದೇ ವೈಧ್ಯರ ಸಲಹೆಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.
ಮೃತಪಟ್ಟ ವಿದ್ಯಾರ್ಥಿನಿ ಐವರ್ನಾಡಿನ ಪಾಂಬಾರು ಸೋಮಸುಂದರ ಎಂಬುವವರ ಪುತ್ರಿ. ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದರು. ಮೃತ ವಿದ್ಯಾರ್ಥಿನಿ ತಂದೆ ತಾಯಿ ಮತ್ತು ಓರ್ವ ಸಹೊದರನನ್ನು ಅಗಲಿದ್ದಾರೆ.