Ad Widget

ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ ” ಕೊರೊನಾ ಮಹಾಮಾರಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಬಳಿಕವೇ ಶಾಲೆಗಳ ಪುನರ್ ಆರಂಭದ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.
ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜುಲೈ 13 ರಿಂದ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಆರಂಭವಾಗಲಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಹೇಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತೋ ಅದೇ ರೀತಿಯ ಸುರಕ್ಷತೆಯನ್ನು ಮೌಲ್ಯಮಾಪನಾ ಕೇಂದ್ರಗಳಲ್ಲೂ ಕೈಗೊಳ್ಳಲಾಗುವುದು.
ದ್ವಿತೀಯ ಪಿಯುಸಿ ಫಲಿತಾಂಶ ಜುಲೈ 18 ಒಳಗೆ ಬರುವ ಸಾಧ್ಯತೆ ಇದೆ. ಆನ್ ಲೈನ್ ಶಿಕ್ಷಣಕ್ಕಾಗಿ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಪೋಷಕರಿಗೆ ಲ್ಯಾಪ್ ಟಾಪ್ ಖರೀದಿಸುವಂತೆ ಒತ್ತಡ ಹೇರುತ್ತಿರುವ ದೂರುಗಳು ಬಂದಿದ್ದು, ಈ ಎಲ್ಲಾ ವಿಚಾರಗಳಿಗೆ ಸಂಬಂಧಿಸಿದಂತೆ ಜುಲೈ 14 ಬೆಂಗಳೂರಿನಲ್ಲಿ ಸಭೆ ನಡೆಸಿ ಚರ್ಚೆ ನಡೆಸುತ್ತೇವೆ. ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಗ್ರಾಮೀಣ ಭಾಗದಲ್ಲಿ ಕಷ್ಟಸಾಧ್ಯವಾಗಿದ್ದು, ದೂರದರ್ಶನ ಶಿಕ್ಷಣದ ಮೂಲಕ ಶಿಕ್ಷಣ ನೀಡುವ ಯೋಜನೆಯೂ ಸರಕಾರದ ಮುಂದಿದೆ ಎಂದರು.

. . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!