ಜಾಲ್ಸೂರು ಗ್ರಾಮದ ಸೋಣಂಗೇರಿಗೆ ಭೇಟಿ ನೀಡಿದ ಶಾಸಕಿ ಭಾಗೀರಥಿ ಮುರುಳ್ಯರವರು ಸ್ಥಳೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಶಾಸಕಿ ಭಾಗೀರಥಿ ಮುರುಳ್ಯರವರಿಗೆ ಸನ್ಮಾನ:
ಮಾ.14ರಂ ದು ಸೋಣಂಗೇರಿ ಅಂಗನವಾಡಿ ಕೇಂದ್ರದಲ್ಲಿ ಸ್ಥಳೀಯ ಸ್ತ್ರೀಶಕ್ತಿ ಸಂಘಗಳಾದ ಬೆಳಕು ಮತ್ತು ಸ್ವರ್ಣಶ್ರೀ ಗುಂಪು ಹಾಗೂ ಸ್ಥಳೀಯ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಸನ್ಮಾನಿಸಲಾಯಿತು.
ಸೋಣಂಗೇರಿಯ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರದ ಭರವಸೆ:
ಸೋಣಂಗೇರಿ ಅಂಗನವಾಡಿ ಕೇಂದ್ರ, ನೂತನ ಸೋಣಂಗೇರಿ ವೃತ್ತ, ಬಸ್ಸು ತಂಗುದಾಣ ಹಾಗೂ ಇನ್ನಿತರ ಕೆಲವು ಪ್ರಮುಖ ಸಮಸ್ಯೆಗಳಿಗೆ ಶೀಘ್ರವೇ ಕ್ರಮಕೈಗೊಳ್ಳುವುದಾಗಿ ಶಾಸಕಿ ಭಾಗೀರಥಿ ಅವರು ಭರವಸೆಯ ಮಾತುಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಶ್ರೀಮತಿ ಶೈಲಜಾ, ಮೇಲ್ವಿಚಾರಕಿ ಶ್ರೀಮತಿ ಉಷಾ, ಜಾಲ್ಸೂರು ಗ್ರಾ. ಪಂ. ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಗ್ರಾಮ ಪಂಚಾಯತ್ ಸಿಬ್ಬಂದಿ ಚಿದಾನಂದ ದರ್ಖಾಸ್ತು, ಜಾಲ್ಸೂರು ಗ್ರಾ.ಪಂ. ಮಾಜಿ ಅಧ್ಯಕ್ಷರುಗಳಾದ ಶ್ರೀಮತಿ ಮಲ್ಲಿಕಾ, ಶ್ರೀಮತಿ ಶಶಿಕಲಾ ನಾಯಕ್ ಗುಂಡ್ಯಡ್ಕ, ಭಾಸ್ಕರ ಗೌಡ ಹೊಸಗದ್ದೆ, ಅಶೋಕ ಅಡ್ಕಾರು, ಸೋಣಂಗೇರಿ ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವೇದಾವತಿ ಸೋಣಂಗೇರಿ, ಶಾಲಾ ಎಸ್. ಡಿ. ಎಂ. ಸಿ. ಅಧ್ಯಕ್ಷೆ ಶ್ರೀಮತಿ ಪ್ರೇಮಾ ಸುರೇಶ್ ರೈ, ನಿವೃತ್ತ ಪ್ರಾಂಶುಪಾಲೆ ಶ್ರೀಮತಿ ತಂಗಮ್ಮ ಮಹಾಬಲಗೌಡ ಕೆಳಗಿನಮನೆ, ಗೊಂಚಲು ಸಮಿತಿ ಅಧ್ಯಕ್ಷೆ ಶ್ರೀಮತಿ ಶೋಭಿತ ಪ್ರಭಾಕರ ಗೌಡ ನಡುಮನೆ, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಶ್ರೀಮತಿ ಮಿನಿಜೋಸ್ ಸೋಣಂಗೇರಿ, ಹಿರಿಯರಾದ ಬಾಲಶೇಖರ ಹೊಸಗದ್ದೆ, ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಗಿರಿಧರ ಗೌಡ ನಾಯರ್ ಹಿತ್ಲು, ಸಂಚಾಲಕ ಸತ್ಯಶಾಂತಿ ತ್ಯಾಗಮೂರ್ತಿ ಕುಕ್ಕನ್ನೂರು, ಉಪಾಧ್ಯಕ್ಷೆ ಶ್ರೀಮತಿ ಹರಿಣಾಕ್ಷಿ ನಡುಮನೆ, ಖಜಾಂಜಿ ಶ್ರೀಮತಿ ಲೀಲಾವತಿ ನಡುಮನೆ, ಜಾಲ್ಸೂರು ಗ್ರಾಮ ಪಂಚಾಯತ್ ಸದಸ್ಯರುಗಳಾದ ಈಶ್ವರ ನಾಯ್ಕ ಸೋಣಂಗೇರಿ, ಶ್ರೀಮತಿ ದೀಪ ಅಜಕಳಮೂಲೆ, ಶ್ರೀಮತಿ ಅಂಬಿಕಾ ಕುಕ್ಕಂದೂರು, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ ಚೆನ್ನಪ್ಪಗೌಡ ಕಲ್ಲಾಜೆ, ಸಹಾಯಕಿ ಶ್ರೀಮತಿ ಅಸೀನ್ ಆರ್ತಾಜೆ ಹಾಗೂ ಬಾಲವಿಕಾಸ ಸಮಿತಿ, ಸ್ತ್ರೀ ಶಕ್ತಿ ಸಂಘ ಸದಸ್ಯರುಗಳು, ಶ್ರೀಕೃಷ್ಣ ಭಜನಾ ಮಂದಿರದ ಆಡಳಿತ ಸಮಿತಿಯ ಸದಸ್ಯರುಗಳು ಹಾಗೂ ಊರವರು ಉಪಸ್ಥಿತರಿದ್ದರು.
ಶ್ರೀಮತಿ ಮಲ್ಲಿಕಾ ಸ್ವಾಗತಿಸಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರವಿಕಲಾ ಚೆನ್ನಪ್ಪಗೌಡ ಕಲ್ಲಾಜೆ ವಂದಿಸಿದರು.ಶ್ರೀಮತಿ ಸುಮಂಗಲಿ ಕೊಳೆತ್ತಿಗುಂಡಿ ಕಾರ್ಯಕ್ರಮ ನಿರೂಪಿಸಿದರು.