Ad Widget

ಎನ್ನೆಂಸಿ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ

ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕುರಿತಾಗಿ ಮಾಹಿತಿ ಕಾರ್ಯಕ್ರಮ ಮಾರ್ಚ್ 15 ರಂದು ಕಾಲೇಜಿನಸಭಾಂಗಣದಲ್ಲಿ ನಡೆಯಿತು. ಸುಳ್ಯದ ಯುವ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ‘ಗ್ರಾಹಕರಹಕ್ಕುಗಳು ಮತ್ತು ಜವಾಬ್ದಾರಿಗಳು, ಗ್ರಾಹಕರ ಸಂರಕ್ಷಣಾ ಕಾಯಿದೆ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ. ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ, ವಿದ್ಯಾರ್ಥಿ ಕ್ಷೇಮಪಾಲನಅಧಿಕಾರಿ ಶ್ರೀಮತಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಮತಾ ಕೆ ಉಪಸ್ಥಿತರಿದ್ದರು. ವಾಣಿಜ್ಯ ಸಂಘದ ಸಂಯೋಜಕರಾದ ಶ್ರೀಮತಿ ದಿವ್ಯ ಟಿ ಎಸ್ ಸ್ವಾಗತಿಸಿದರು. ಅಂತಿಮ ವಾಣಿಜ್ಯ ಪದವಿಯವಿದ್ಯಾರ್ಥಿನಿ ಕು. ಸೋನಿಕಾ ವಂದಿಸಿದರು. ಪದ್ಮಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ವಾಣಿಜ್ಯವಿಭಾಗದ ಉಪನ್ಯಾಸಕರಾದ ಶ್ರೀ ಶ್ರೀಧರ್ ವಿ, ಶ್ರೀಮತಿ ಗೀತಾ ಶೆಣೈ, ಉಪಸ್ಥಿತರಿದ್ದರು ವಾಣಿಜ್ಯ ಪದವಿವಿದ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading